ದೇವನಹಳ್ಳಿ: ವರದಕ್ಷಿಣೆ ಎಂಬುದು ಸಮಾಜಕ್ಕೆ ಕಂಟಕವಾಗಿರುವ ಸಾಮಾಜಿಕ ಪಿಡುಗು. ಇದರ ಪರಿಣಾಮ ಅನೇಕ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ರೂಪಶ್ರೀ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಹಣಬೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ‘ವರದಕ್ಷಿಣೆ – ಒಂದು ಸಾಮಾಜಿಕ ಪಿಡುಗು’ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮದುವೆ ಸಂದರ್ಭದಲ್ಲಿ ವಧುವಿನ ಕುಟುಂಬ ವರ ಅಥವಾ ಅವರ ಕುಟುಂಬಕ್ಕೆ ಹಣ, ಆಸ್ತಿ, ಒಡವೆ ಹಾಗೂ ಅಮೂಲ್ಯ ವಸ್ತುಗಳನ್ನು ನೀಡುವುದನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ. ಈ ಪದ್ಧತಿ ಸಮಾಜದಲ್ಲಿ ಅನೇಕ ಅನಿಷ್ಠಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದರು.

1961ರಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ವರದಕ್ಷಿಣೆ ಕೇಳುವುದು, ನೀಡುವುದು ಅಥವಾ ಸ್ವೀಕರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಕಿರುಕುಳ ಪ್ರಕರಣಗಳಿಗೆ ಐದು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಗ್ರಾಮ ಮಟ್ಟದಿಂದಲೇ ವರದಕ್ಷಿಣೆ ವಿರೋಧಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಯಿತು ಎಂದು ಹೇಳಿದರು.

ಮಿಷನ್ ಶಕ್ತಿ ಸಂಯೋಜಕ ರಾಜಶೇಖರ ಎನ್.ಮಾತನಾಡಿ, ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೆ ಬಂದು ಹಲವು ದಶಕಗಳಾದರೂ ಇಂದಿಗೂ ಅದರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇರುವುದೇ ವಿಷಾದನೀಯ ಸಂಗತಿ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಜತೆಗೆ ವರದಕ್ಷಿಣೆ, ಬಾಲ್ಯ ವಿವಾಹ, ಮರ್ಯಾದೆಗೇಡು ಹತ್ಯೆ, ಲಿಂಗಾನುಪಾತ ಮತ್ತು ಹೆಣ್ಣುಮಕ್ಕಳ ಶಿಕ್ಷಣದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.

ಹಣಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಮೇಲ್ವಿಚಾರಕಿ ಜಯಲಕ್ಷ್ಮಿ, ಅಣಬೆ ವೃತ್ತ ಅಕೌಂಟೆಂಟ್ ಸುರೇಶ್, ಮಹಿಳಾ ಸಬಲೀಕರಣ ಘಟಕದ ಸದಸ್ಯರು ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-1862841104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.