ದೇವನಹಳ್ಳಿ: ಗೃಹಲಕ್ಷ್ಮಿ ಯೋಜನೆಯ ಹಣ ಮೃತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿರುವುದನ್ನು ಪತ್ತೆಹಚ್ಚಿ, ಅಂತಹ ಖಾತೆಗಳಿಗೆ ಹಣ ಜಮೆಯಾಗುವುದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಬಿ. ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು ₹200 ಕೋಟಿ ಗೃಹಲಕ್ಷ್ಮಿ ಹಣ ಮೃತರ ಖಾತೆಗಳಿಗೆ ಜಮೆಯಾಗುತ್ತಿದೆ ಎಂದು ತಿಳಿಸಿದ ಅವರು, ಮೃತರ ಖಾತೆಗಳ ಮಾಹಿತಿ ಸಂಗ್ರಹಿಸಿ, ಹಣ ವರ್ಗಾವಣೆ ನಿಲ್ಲಿಸುವಂತೆ ಸೂಚಿಸಿದರು. ಮರಣಾನಂತರ ಎಷ್ಟು ತಿಂಗಳು ಹಣ ಜಮೆಯಾಗಿದೆ ಅಷ್ಟು ಮೊತ್ತವನ್ನು ವಾಪಸ್ ಪಡೆಯಬೇಕು ಎಂದರು.

ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿದ್ದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ಗೃಹ ಜ್ಯೋತಿ ಯೋಜನೆಯಲ್ಲಿ ಮೀಟರ್ ಪರಿಶೀಲನೆ ಇಲ್ಲದೆ ಬಿಲ್ ನೀಡುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಿಲ್ ಕಲೆಕ್ಟರ್ಗಳಿಗೆ ಸೂಕ್ತ ತರಬೇತಿ ನೀಡುವಂತೆ ರಾಜಣ್ಣ ಸೂಚಿಸಿದರು. ಗ್ರಾಮೀಣ ಭಾಗಗಳಲ್ಲಿ ಬಸ್ಗಳ ಕೊರತೆಯನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ವಸಂತಿ ಅಮರ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ರಾಜಶೇಖರ್, ಅಬ್ದುಲ್ ಬಶೀರ್, ನಾರಾಯಣಸ್ವಾಮಿ ಸೇರಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-15-1713695176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.