ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಭಿವೃದ್ಧಿ ಹರಿಕಾರ ದೇವರಾಜ್ ಅರಸ್’

Last Updated 20 ಆಗಸ್ಟ್ 2019, 13:20 IST
ಅಕ್ಷರ ಗಾತ್ರ

ದೇವನಹಳ್ಳಿ: ‘ರಾಜ್ಯದ ಇತಿಹಾಸದಲ್ಲಿ ಎಂದೆಂದಿಗೂ ಜನಮನ ಚಿರಸ್ಥಾಯಿಯಾಗಿ ತಮ್ಮ ಹೆಸರನ್ನು ಉಳಿಸಿಕೊಂಡು ಹೋಗಿರುವ ಅಭಿವೃದ್ಧಿಯ ಹರಿಕಾರ ದೇವರಾಜ್ ಅರಸು ಅವರು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಅರಸು ಅವರ 104ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿ ಕೈಗೆ ಕೆಲಸವಿಲ್ಲದೆ ಕುಳಿತಿದ್ದ ದಲಿತರು, ಹಿಂದುಳಿದ ವರ್ಗಗಳ ಸಮುದಾಯಕ್ಕೆ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಭೂಸುಧಾರಣೆ ಕಾಯ್ದೆಯಿಂದ ಸಾಧ್ಯವಾಗಿದೆ ಎಂದರು.

ಜೊತೆಗೆ ಹಿಂದುಳಿದ ವರ್ಗದಲ್ಲಿರುವ ಅನೇಕ ಜಾತಿಗಳಿಗೆ ಮೀಸಲಾತಿ ನೀಡಿ ರಾಜಕೀಯ ಮತ್ತು ಆರ್ಥಿಕವಾಗಿ ಸಬಲರಾಗಲು ಅವಕಾಶ ಮಾಡಿಕೊಟ್ಟ ಧೀಮಂತ ವ್ಯಕ್ತಿ ಅಪಾರ ಜನಮನ್ನಣೆಯ ನಾಯಕ ಅವರು ಆಗಿದ್ದರು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತ ಕುಮಾರಿ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚೈತ್ರಾ ವೀರೇಗೌಡ ಮಾತನಾಡಿ, ‘ಜಿಡ್ಡುಗಟ್ಟಿದ ರಾಜಕೀಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದ ಅರಸು ಅವರು ರಾಜಕೀಯ ವ್ಯವಸ್ಥೆಯಲ್ಲಿ ಮತ್ತು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದು ಜನಾನುರಾಗಿಯಾಗಿ ಯೋಜನೆಗಳನ್ನು ಜಾರಿಗೊಳಿಸಿದರು’ ಎಂದರು.

ಹಿರಿಯರು, ಕಿರಿಯರು ಎಂಬ ಭಾವನೆ ಅವರಲ್ಲಿ ಇರಲಿಲ್ಲ, ಅವರು ಜಾರಿಗೆ ತಂದ ಅನೇಕ ಯೋಜನೆಗಳು ಪ್ರಸ್ತುತ ಆಡಳಿತದಲ್ಲಿ ಸ್ಫೂರ್ತಿಯಾಗಿವೆ ಎಂದು ಹೇಳಿದರು.

ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಗುರಪ್ಪ ಮಾತನಾಡಿದರು. ತಹಶೀಲ್ದಾರ್ ಬಾಲಕೃಷ್ಣ, ಪುರಸಭೆ ಸದಸ್ಯ ಜಿ.ಎ. ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತೀರ್ಣಾಧಿಕಾರಿ ಜಿ.ಸಿ. ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸವಪ್ಪ, ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT