ದೇವನಹಳ್ಳಿ:ಪಟ್ಟಣದ ಆಕಾಶ್ ಆಸ್ಪತ್ರೆಯಲ್ಲಿ ಶನಿವಾರ ರೋಗಿಯೊಬ್ಬ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಕೋಡಗುರ್ಕಿ ಗ್ರಾಮದ ಗೌತಮ್ ಯಾದವ್ (34) ಮೃತರು. ಆರೋಗ್ಯ ಸಮಸ್ಯೆಯಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಗೌತಮ್ ಯಾದವ್ ಶನಿವಾರ ಬೆಳಗ್ಗೆ ಸುಮಾರು 7.30ರ ವೇಳೆಗೆ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟರು.

ಈ ಸಾವಿಗೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರೋಗಿಯೊಬ್ಬರು ಮೂರನೇ ಮಹಡಿಗೆ ತೆರಳುವವರೆಗೆ ಭದ್ರತಾ ಸಿಬ್ಬಂದಿ ಗಮನ ಹರಿಸದಿರುವುದು ಹಾಗೂ ಟೆರಸ್ ಮುಕ್ತವಾಗಿರುವುದೇ ದುರಂತಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-15-563648207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.