ದೇವನಹಳ್ಳಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎನ್.ಅನುರಾಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002ರಲ್ಲಿ ಜೂನ್ 12ಅನ್ನು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವಾಗಿ ಘೋಷಿಸಿದೆ. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

‘ಬಾಲಕಾರ್ಮಿಕರಿಗೆ ರೆಡ್ ಕಾರ್ಡ್: ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆ ಕೆಲಸ’ ಎಂಬುದು ಈ ವರ್ಷದ ಘೋಷ ವಾಕ್ಯವಾಗಿದೆ. ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಜೂನ್ 12ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾ ಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೈಗಾರಿಕೆಗಳು ಹಾಗೂ ಕಾರ್ಮಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಜಾಗೃತಿ ಜಾಥಾ ನಡೆಸಿ ಕಾರ್ಮಿಕರು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಜಾಥಾದಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಟಿ–ಶರ್ಟ್ ಮತ್ತು ಟೋಪಿ ವಿತರಣೆ, ಲಘು ಉಪಹಾರದ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

28 ಬಾಲ ಕಾರ್ಮಿಕರ ರಕ್ಷಣೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ವಾಣಿಜ್ಯ ಸಂಸ್ಥೆಗಳ ಮೇಲೆ ಅಧಿಕಾರಿಗಳು ನಡೆಸಿದ ಜಂಟಿ ದಾಳಿಯಲ್ಲಿ 28 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದರು.

ರಕ್ಷಿಸಲ್ಪಟ್ಟ ಬಾಲ ಹಾಗೂ ಕಿಶೋರ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಶಿಕ್ಷಣ, ಕುಟುಂಬ ನಿರ್ವಹಣೆ ಮತ್ತು ಮೂಲ ಸೌಲಭ್ಯ ಮೂಲಕ ಅವರ ಜೀವನಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡು ಬಂದರೆ ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಾಗಡಿ, ನ್ಯಾಯಾಧೀಶ ನಿತೀಶ್, ಕಾರ್ಮಿಕ ಅಧಿಕಾರಿ ಮುಕುಂದ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-716226600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.