ದೇವನಹಳ್ಳಿ: ಜಿಲ್ಲೆಯ ರೈತರು ಯೂರಿಯಾ, ರಸಗೊಬ್ಬರ ಖರೀದಿಸಲು ಇನ್ನುಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯವಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ.

ದೇವನಹಳ್ಳಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ತಯಾರಕರು, ಸರಬರಾಜುದಾರರು ಹಾಗೂ ಮಾರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು, 2026–27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದರು.

ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಹಾಗೂ ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಕೆ-ಕಿಸಾನ್ ತಂತ್ರಾಂಶದ ಮೂಲಕ ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ನೋಂದಣಿ ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಮ್ಮ ಪಹಣಿ, ಬ್ಯಾಂಕ್ ಪಾಸ್ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ಎಫ್ಐಡಿ ಹೊಂದಿರುವವರು ತಮ್ಮ ಎಲ್ಲಾ ಸರ್ವೆ ಸಂಖ್ಯೆಗಳನ್ನೂ ಅದಕ್ಕೆ ಜೋಡಿಸಿಕೊಳ್ಳಲು ಅವಕಾಶವಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-1232870261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.