ದೇವನಹಳ್ಳಿ: ಮುಂಗಾರು ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಬೇಕು. ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಪ್ರಕಸ್ತ ಸಾಲಿನ ಕೃಷಿ ಪರಿಕರ ತಯಾರಕರ ಹಾಗೂ ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದರು.

ರೈತರಿಗೆ ರಸಗೊಬ್ಬರ ಲಭ್ಯತೆ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ರಸಗೊಬ್ಬರಗಳಿಗೆ ಪರ್ಯಾಯವಾಗಿ ಸಾವಯವ ಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಬೇಕು. ರಸಗೊಬ್ಬರ ಮಾರಾಟ ಮಳಿಗೆಗಳ ಮುಂದೆ ದಾಸ್ತಾನು ಹಾಗೂ ಗರಿಷ್ಠ ಮಾರಾಟ ದರದ ವಿವರಗಳನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ಸೂಚಿಸಿದರು.

ಯೂರಿಯಾ ರಸಗೊಬ್ಬರವನ್ನು ಕಡ್ಡಾಯವಾಗಿ ಪಿಒಎಸ್ ಯಂತ್ರದ ಮೂಲಕವೇ ಮಾರಾಟ ಮಾಡಬೇಕು. ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಬಾರದು. ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ನಡೆಸುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಯೂರಿಯಾ ಮಾರಾಟವನ್ನು ‘ಕೆ-ಕಿಸಾನ್’ ತಂತ್ರಾಂಶದ ಮೂಲಕ ನಡೆಸಲು ಪ್ರತಿ ತಾಲ್ಲೂಕಿನ ಚಿಲ್ಲರೆ ಮಾರಾಟಗಾರರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಪ್ರಸಕ್ತ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿನ 69,548 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರಲ್ಲಿ 69,291 ಹೆಕ್ಟೇರ್ ಆಹಾರಧಾನ್ಯ ಹಾಗೂ 257 ಹೆಕ್ಟೇರ್ ಎಣ್ಣೆಕಾಳು ಬೆಳೆ ಸೇರಿವೆ. ಬಿತ್ತನೆಗೆ ಅನುಗುಣವಾಗಿ ಯೂರಿಯಾ 11,418 ಮೆಟ್ರಿಕ್ ಟನ್, ಡಿಎಪಿ 7,567 ಮೆಟ್ರಿಕ್ ಟನ್, ಎಂಒಪಿ 1,354 ಮೆಟ್ರಿಕ್ ಟನ್, ಎಸ್ಎಸ್ಪಿ 1,086 ಮೆಟ್ರಿಕ್ ಟನ್ ಹಾಗೂ ಕಾಂಪ್ಲೆಕ್ಸ್ ರಸಗೊಬ್ಬರ 14,744 ಮೆಟ್ರಿಕ್ ಟನ್ ಸೇರಿ ಒಟ್ಟು 36,169 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಸ್ತುತ ತಿಂಗಳಲ್ಲಿ 1,732 ಮೆಟ್ರಿಕ್ ಟನ್ ಡಿಎಪಿ, 1,327 ಮೆಟ್ರಿಕ್ ಟನ್ ಯೂರಿಯಾ ಹಾಗೂ 2,303 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ಬೇಡಿಕೆ ಇದ್ದು, ಅದನ್ನು ಪೂರೈಸಲು 17,482 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಲಭ್ಯವಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ತೋಟಗಾರಿಕೆ, ರೇಷ್ಮೆ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-723327314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.