ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರಿ ಸಾಧನೆಗೆ ಶ್ರದ್ಧೆ ಅಗತ್ಯ

Last Updated 4 ಫೆಬ್ರುವರಿ 2021, 8:35 IST
ಅಕ್ಷರ ಗಾತ್ರ

ದೇವನಹಳ್ಳಿ: ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿ, ಶ್ರದ್ಧೆಯಿಂದ ಓದುವುದನ್ನು ಅಭ್ಯಾಸ ಮಾಡಿಕೊಳ್ಳುವ ಮೂಲಕ ಸಾಧನೆಯ ಶಿಖರ ತಲುಪಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಅಂಗವಾಗಿ ಒಬ್ಬ ವಿದ್ಯಾರ್ಥಿನಿಯನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯನ್ನಾಗಿ ಪರಿಭಾವಿಸುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ. ನಾಯಕ್‌ ಮಾತನಾಡಿ, ವೈಯಕ್ತಿಕ ಭಿನ್ನತೆಯು ಪ್ರತಿಯೊಬ್ಬರ ಸೌಭಾಗ್ಯವಾಗಿದ್ದು, ಎಲ್ಲರೂ ಒಂದೊಂದು ವಿಭಾಗದಲ್ಲಿ ಬುದ್ಧಿವಂತರಾಗಿರುತ್ತಾರೆ. ಯಾರೊಬ್ಬರೂ ತಮ್ಮೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಿಕೊಳ್ಳಬಾರದು ಎಂದರು.

‌ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಮಾತನಾಡಿ, ಹೆಣ್ಣುಮಕ್ಕಳನ್ನು ಪೋಷಿಸುವ ಹಾಗೂ ಅವರಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಗುರುತಿಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಆಹ್ವಾನಿಸಿ ಹೆಣ್ಣುಮಕ್ಕಳ ದಿನ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT