ಸೋಮವಾರ, ಜೂನ್ 21, 2021
21 °C

ಸೇವೆಯೇ ರಾಮಕೃಷ್ಣಾಶ್ರಮದ ಧ್ಯೇಯ: ಸ್ವಾಮಿ ವಿಷ್ಣುಮಯಾನಂದಜೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ‘ಬಡವರ ಮತ್ತು ಸಂಕಷ್ಟದಲ್ಲಿರುವವರ ಸೇವೆ ಮಾಡುವುದು ನಮ್ಮ ಧ್ಯೇಯವಾಗಿದೆ. ಹಲವು ವರ್ಷಗಳಿಂದಲೂ ಈ ಕಾರ್ಯದಲ್ಲಿ ರಾಮಕೃಷ್ಣಾಶ್ರಮ ನಿರತವಾಗಿದೆ’ ಎಂದು ಶಿವನಹಳ್ಳಿ ರಾಮಕೃಷ್ಣ ಆಶ್ರಮದ ಸ್ವಾಮಿ ವಿಷ್ಣುಮಯಾನಂದ ಜೀ ಹೇಳಿದರು.

ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಬಡ ಕುಟುಂಬಗಳಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಆಹಾರದ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್‌ಗಳನ್ನು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ. ಆಶ್ರಮದೊಂದಿಗೆ ಇನ್ಫೊಸಿಸ್‌ ಪ್ರತಿಷ್ಠಾನ ಕೈಜೋಡಿಸಿರುವುದರಿಂದ ಹೆಚ್ಚು ಜನರಿಗೆ ಸೌಲಭ್ಯ ನೀಡಲು ಸಾಧ್ಯವಾಗಿದೆ. ಅರ್ಹರನ್ನು ಗುರುತಿಸುವ ನಿಟ್ಟಿನಲ್ಲಿ ಆಯಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಗುರುತಿಸಿದ್ದಾರೆ. ಡಿವೈಎಸ್ಪಿ ಡಾ.ಎಚ್.ಎಂ.ಮಹದೇವಪ್ಪ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ, ಜಿಗಣಿ, ಚಂದಾಪುರ, ಅತ್ತಿಬೆಲೆಗಳಲ್ಲಿ ಪೊಲೀಸರ ಸಹಕಾರದಿಂದ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು.

ಡಿವೈಎಸ್ಪಿ ಡಾ.ಎಚ್.ಎಂ.ಮಹದೇವಪ್ಪ, ಸರ್ಕಲ್‌ ಇನ್‌ಸ್ಪೆಕ್ಟರ್‌ ಕೃಷ್ಣ, ಸಬ್‌ ಇನ್‌ಸ್ಪೆಕ್ಟರ್‌ ಬಿ.ಟಿ.ಗೋವಿಂದ್‌
ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.