ಮಂಗಳವಾರ, ಜನವರಿ 25, 2022
28 °C

ಬೂದಿಗೆರೆ: ಶಾಲೆಗೆ ವಿಜ್ಞಾನ ಪರಿಕರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಗತ್ಯ ಸಹಕಾರ ನೀಡಲು ಬದ್ಧ’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸಗೌಡ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ರಾಜ್ಯಮಟ್ಟದಲ್ಲಿ ವಿಜೇತರಾಗಿರುವ ಅಗಸ್ತ್ಯ ಫೌಂಡೇಷನ್‌ನಿಂದ ಶಾಲೆಗೆ ವಿಜ್ಞಾನ ಪರಿಕರ ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯ ಸೌಲಭ್ಯಗಳು ಗ್ರಾಮಸ್ಥರಿಂದ ಸಿಗಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಿ ಬೂದಿಗೆರೆ ಗ್ರಾಮಕ್ಕೆ ಕೀರ್ತಿ ತರಬೇಕು. ಕ್ರೀಡೆ, ಸಾಂಸ್ಕೃತಿಕ ರಂಗದಲ್ಲೂ ಯಶಸ್ವಿಯಾಗಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಆನಂದ್ ಮಾತನಾಡಿ, ಗ್ರಾಮೀಣ ಭಾಗದ ಶಾಲೆಯ ಮಕ್ಕಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಷಯ. ವಿಜ್ಞಾನ ಪರಿಕರಗಳನ್ನು ಬಳಸಿಕೊಂಡು ಹೆಚ್ಚಿನ ಪ್ರಗತಿ ಹೊಂದಬೇಕು. ಗ್ರಾಮ ಪಂಚಾಯಿತಿಯಿಂದ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ನೀಡಲು ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣಮೂರ್ತಿ, ಸಿಆರ್‌ಪಿ ಲೋಕೇಶ್, ಎಸ್‌ಡಿಎಂಸಿ ಅಧ್ಯಕ್ಷ ಶ್ರೀಧರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ್, ಸದಸ್ಯ ರೂಪಾ ಶ್ರೀನಿವಾಸ್, ಮೋಹನ್, ವೆಂಕಟೇಶ್, ಅನ್ವರ್ ಪಾಷಾ, ಪದ್ಮಾ ಆನಂದ್, ಕೃಷ್ಣಮ್ಮಬಾಬು, ಕಾರ್ಯದರ್ಶಿ ರಮೇಶ್, ಮುಖ್ಯಶಿಕ್ಷಕ ಲಕ್ಷ್ಮಣ್ ಮೂರ್ತಿ, ಸಹಶಿಕ್ಷಕರಾದ ಉಮಾ ಶಂಕರ್, ರಾಮು, ಮುನಿಯಪ್ಪ, ಅಗಸ್ತ್ಯ ಫೌಂಡೇಷನ್‌ನ ಪದಾಧಿಕಾರಿ ಸತೀಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.