ಶನಿವಾರ, ನವೆಂಬರ್ 16, 2019
24 °C

ಜಿಲ್ಲಾ ಅಥ್ಲೆಟಿಕ್ ತಂಡ ಆಯ್ಕೆ ಪ್ರಕ್ರಿಯೆ ನಾಳೆ

Published:
Updated:

ಹೊಸಕೋಟೆ: ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆಯಲಿರುವ 17ನೇ ರಾಷ್ಟ್ರೀಯ ಅಂತರ ಜಿಲ್ಲಾ ಕಿರಿಯರ ಅಥ್ಲೆಟಿಕ್ ಕೂಟದಲ್ಲಿ ಭಾಗವಹಿಸಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಡಕ್ಕೆ ಆಯ್ಕೆ ಪ್ರಕ್ರಿಯೆಯನ್ನು ನ. 8ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯಾನಗರದ ಕ್ರೀಡಾ ಹಾಸ್ಟಲ್‌ನಲ್ಲಿ ನಡೆಸಲಾಗುತ್ತದೆ.

ಸ್ಪರ್ಧಿಗಳು 14 ವರ್ಷದ ಒಳಗಿನವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಜಿಲ್ಲಾ ಕ್ರೀಡಾಪಟುಗಳು ಆಯ್ಕೆ ದಿನದಂದು ವಯಸ್ಸಿನ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೆಚ್.ಎನ್. ಆನಂದ ಕುಮಾರ್ ಅವರಲ್ಲಿ ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 91136 41591 ಅನ್ನು ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)