ಮಂಗಳವಾರ, ಅಕ್ಟೋಬರ್ 22, 2019
25 °C

21 ರಂದು ಜಿಲ್ಲಾಮಟ್ಟದ ಜನಸಂಪರ್ಕ ಅಭಿಯಾನ

Published:
Updated:
Prajavani

ದೊಡ್ಡಬಳ್ಳಾಪುರ: ಜಮ್ಮು – ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ಕಾರಣಗಳನ್ನು ಜನತೆಗೆ ತಿಳಿಸಲು ಸೆ. 21ರಂದು ಜಿಲ್ಲಾ ಮಟ್ಟದ ಜನಸಂಪರ್ಕ ಅಭಿಯಾನ ಗ್ರಾಮಾಂತರ ಜಿಲ್ಲಾ ರಾಷ್ಟ್ರೀಯ ಏಕತಾ ಜನಸಂಪರ್ಕ ಅಭಿಯಾನ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯಲ್ಲಿನ ಡಿಪಿವಿ ಕನ್ವೆನ್ಷನ್ ಹಾಲ್‍ನಲ್ಲಿ ನಡೆಸಲಾಗುತ್ತಿದೆ ಎಂದು ಜನಸಂಪರ್ಕ ಅಭಿಯಾನದ ಜಿಲ್ಲಾ ಪ್ರಮುಖ್ ಎ.ವಿ.ನಾರಾಯಣಸ್ವಾಮಿ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ‘ಸಂವಿಧಾನ ಶಿಲ್ಪಿ ಡಾ ಆರ್.ಅಂಬೇಡ್ಕರ್ ಅವರ ವಿರೋಧದ ನಡುವೆಯೂ ಸಹ ಓಟು ಪಡೆಯುವ ಉದ್ದೇಶದಿಂದ ನೆಹರು ಅವರು ತಾತ್ಕಾಲಿಕ ಕ್ರಮವಾಗಿ 370ನೇ ವಿಧಿಯನ್ನು ಸಂವಿಧಾನದ ಮೇಲೆ ಹೇರಿದರು. ಇದರಿಂದಾಗಿ ಭಾರತದ ಅವಿಭಾಜ್ಯ ಅಂಗವಾಗಿದ್ದ ಜಮ್ಮುಕಾಶ್ಮೀರಕ್ಕೆ ಯಾವುದೇ ಸೌಲಭ್ಯ, ಅಭಿವೃದ್ಧಿ ಹೊಂದಲು ಸಾಧ್ಯವಾಗಲಿಲ್ಲ. ದೇಶದ ಜನತೆಯ ಬಹು ವರ್ಷಗಳ ಕನಸಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೂಲಕ ಪ್ರದಾನ ಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ’ ಎಂದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ‘21ರಂದು ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಂಸತ್ ಸದಸ್ಯ ಬಿ.ಎನ್‌.ಬಚ್ಚೆಗೌಡ, ರಾಜ್ಯ ಸಂಚಾಲಕ ಛಲವಾದಿ ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ’ ಎಂದರು.

ತಾಲ್ಲೂಕು ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಶಂಕರ್, ನಾರಾಯಣಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎನ್‌.ಹನುಮಂತೇಗೌಡ, ಜಿಲ್ಲಾ ಉಪಾಧ್ಯಕ್ಷ ಅಶ್ವಥ್‍ನಾರಾಯಣಗೌಡ, ಗೋಪಿ, ನಗರ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಜನಸಂಪರ್ಕ ಅಭಿಯಾನದ ಜಿಲ್ಲಾ ಪ್ರಮುಖ್ ರಾಮಕೃಷ್ಣಯ್ಯ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)