ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿಗೆ ಸೋಂಕು: ಡಿಸಿ ಕಚೇರಿ ಸೀಲ್‌ಡೌನ್‌

Last Updated 2 ಜುಲೈ 2020, 16:52 IST
ಅಕ್ಷರ ಗಾತ್ರ

ದೇವನಹಳ್ಳಿ:ಬೆಂಗಳೂರುಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು ಜಿಲ್ಲಾಡಳಿತ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಮಾರ್ಚ್ 15 ರಿಂದ ಕೊರೊನ ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಕ್ಕೆ ಬರುವ ಅನಿವಾಸಿ ಭಾರತೀಯರು ಹಾಗೂ ಇತರರನ್ನು ತಪಾಸಣೆ ನಡೆಸಿ ದೇವನಹಳ್ಳಿಯ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ನಡುವೆ ಸೋಂಕು ಹರಡಿದ್ದಾದರೂ ಹೇಗೆ ಎಂಬುದು ನನಗೂ ಅರ್ಥವಾಗುತ್ತಿಲ್ಲ’ ಎಂದರು.

‘ಕಳೆದ ಮಂಗಳವಾರ ಜ್ವರ ಮತ್ತು ನೆಗಡಿ ಕೆಮ್ಮಿನಿಂದ ಬಳಲುತ್ತಿದ್ದೆ. ಅನುಮಾನದ ಮೇರೆಗೆ ಪರೀಕ್ಷಿಸಿದಾಗ ಸೋಂಕು ಇರುವುದು ಖಚಿತಪಟ್ಟಿದೆ. ಪ್ರಸ್ತುತ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆಸ್ಪತ್ರೆಗೆ ದಾಖಲಾಗುವ ಚಿಂತನೆ ಇದೆ’ ಎಂದು ಹೇಳಿದರು.

‘ಜಿಲ್ಲಾಧಿಕಾರಿ ಕಚೇರಿಗೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿದೆ’ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಡಳಿತ ಕಚೇರಿಯಲ್ಲಿ 600ಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT