ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿ ವಿಳಂಬವಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಆಸ್ಪತ್ರೆ ಕಾರ್ಯಾರಂಭ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನ ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು, 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ಕಾಮಗಾರಿ ತುರ್ತಾಗಿ ಆರಂಭಿಸಬೇಕೆಂದು ಮನವಿ ಮಾಡಿದರು.

ಮುಖಂಡರಾದ ಸಂಜೀವ್ ನಾಯಕ್, ಆರ್.ಚಂದ್ರತೇಜಸ್ವಿ, ಚಿದಾನಂದ್, ತೂಬಗೆರೆ ಷರೀಫ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ನಗರದ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ ನಿರ್ಮಿಸಲು ಸರ್ಕಾರ ನಿರ್ಧರಿಸಿತ್ತು. ಇದರೊಂದಿಗೆ ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿತ್ತು.

ಕಳೆದ ಮಾರ್ಚ್ನಲ್ಲಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಆಸ್ಪತ್ರೆಯಿಂದಾಗಿ ದೊಡ್ಡಬಳ್ಳಾಪುರ ಮಾತ್ರವಲ್ಲದೇ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ಗೌರಿಬಿದನೂರು ಸೇರಿದಂತೆ ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವ ನಿರೀಕ್ಷೆಯಿತ್ತು.

ಸದ್ಯ ಜಿಲ್ಲಾ ಆಸ್ಪತ್ರೆ ಮತ್ತು ಕ್ರಿಟಿಕಲ್ ಕೇರ್ ಯೂನಿಟ್ ಕಾಮಗಾರಿ ಸ್ಥಗಿತಗೊಂಡಿದೆ. ತುರ್ತಾಗಿ ಈ ಆಸ್ಪತ್ರೆ ನಿರ್ಮಾಣ ಕಾರ್ಯವಾಗಬೇಕು. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಅಗತ್ಯ ತಜ್ಞ ವೈದ್ಯರ ಅಲಭ್ಯದಿಂದಾಗಿ ತಾಯಿ ಮತ್ತು ಮಕ್ಕಳ ಸಾವು ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಚಿವ ಸಂಪುಟ ಅನುಮೋದನೆಯಾಗಿ ಈಗ ಶಂಕಸ್ಥಾಪನೆ ನೆರವೇರಿಸಲಾಗಿದೆ. ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶ ತೀವ್ರ ಗತಿಯಲ್ಲಿ ಬೆಳೆಯುತ್ತಿದ್ದು, ಇಲ್ಲಿ ಜಿಲ್ಲಾಸ್ಪತ್ರೆ ಹಾಗೂ ಇಎಸ್ಐ ಆಸ್ಪತ್ರೆ ಅಗತ್ಯವಿದೆ. ವೈದ್ಯರ ಕೊರತೆ ಇದೆ. ಸಚಿವರು ಈ ಬಗ್ಗೆ ಕ್ರಮ ವಹಿಸಬೇಕಿದೆ. ಜಿಲ್ಲಾಸ್ಪತ್ರೆಗೆ ಅಡ್ಡಗಾಲು ಹಾಕುತ್ತಿದ್ದೇವೆ ಎನ್ನುವ ಆರೋಪ ಸತ್ಯಕ್ಕೆ ದೂರ ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ಜಿಲ್ಲಾಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಆಗಬೇಕೆಂಬುದರಲ್ಲಿ ಗೊಂದಲ ಇಲ್ಲ. ಕ್ರಿಟಿಕಲ್ ಕೇರ್ ಘಟಕಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಈಗಾಗಲೇ 100 ಹಾಸಿಗೆ ತಾಯಿ ಮತ್ತು ಮಗು ಆಸ್ಪತ್ರೆ ಇರುವುದರಿಂದ ಬೇರೆ ಕಡೆ ಮಾಡುವುದು ಬೇಡ. ಸಿಬ್ಬಂದಿ ಹಾಗೂ ವೈದ್ಯರ ಬಳಕೆಗೆ ಪೂರಕವಾಗಿ ಹೆಚ್ಚುವರಿ 100 ಹಾಸಿಗೆ ಸೇರಿಸುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿ ಎಲ್ಲ ಒಂದೇ ಕಡೆ ಇರಬೇಕಿದೆ ಎಂದು ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಈಗ ಈ ಪ್ರಸ್ತಾವ ಕೈಬಿಡಲಾಗಿದೆ. ಕ್ರಿಟಿಕಲ್ ಕೇರ್ ಯೂನಿಟ್ ನಿರ್ಮಾಣಕ್ಕೆ ಯಾವುದೇ ತೊಂದರೆಯಿಲ್ಲ ಎಂದರು.

ನಗರಸಭೆ ಸದಸ್ಯ ಅಲ್ತಾಫ್, ಜಿಲ್ಲಾಸ್ಪತ್ರೆ ಹೋರಾಟ ಸಮಿತಿ ಸದಸ್ಯರಾದ ಪಿ.ಎ.ವೆಂಕಟೇಶ್, ರಾಜಘಟ್ಟ ರವಿ, ಹನುಮೇಗೌಡ, ಚಿಕ್ಕಮೂರ್ತಿ, ಹಮಾಮ್ ವೆಂಕಟೇಶ್, ಗುರುರಾಜಪ್ಪ, ನಾಗರಾಜ್, ಚೌಡರಾಜ್, ಎಚ್.ಎಸ್.ವೆಂಕಟೇಶ್, ರಾಜುಸಣ್ಣಕ್ಕಿ, ಎಚ್.ಮುನಿಪಾಪಯ್ಯ, ಡಿ.ವೆಂಕಟೇಶ್, ಮುನಿರಾಜು, ಜನಪರ ಮಂಜು, ನರೇಂದ್ರ, ಪಿ.ಸಿ.ಮಂಜುನಾಥ್, ರಮೇಶ್ ಸಂಕ್ರಾಂತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.