ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರಕ್ಕೆ ಜಿಲ್ಲಾಸ್ಪತ್ರೆ ಮಂಜೂರು: ಸಚಿವ ಕೆ.ಎಚ್.ಮುನಿಯಪ್ಪ

Published 15 ಮಾರ್ಚ್ 2024, 6:29 IST
Last Updated 15 ಮಾರ್ಚ್ 2024, 6:29 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ನಗರಕ್ಕೆ ಜಿಲ್ಲಾಸ್ಪತ್ರೆ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ರಾಜಕೀಯವೇ ಬೇರೆ, ಅಭಿವೃದ್ಧಿಯೇ ಬೇರೆ. ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ತಾಲ್ಲೂಕು ಪಂಚಾಯಿತಿ ಅನಿರ್ಬಂಧಿತ ಕ್ರಿಯಾ ಯೋಜನೆಯಡಿ ಸರ್ಕಾರಿ ಪ್ರೌಢಶಾಲೆಗಳಿಗೆ ಡೆಸ್ಕ್, ಅಂಗನವಾಡಿಗಳಿಗೆ ಸಾಮಗ್ರಿ ವಿತರಿಸಿ
ಮಾತನಾಡಿದರು.

ದೊಡ್ಡಬಳ್ಳಾಪುರಕ್ಕೆ ಜಿಲ್ಲಾಸ್ಪತ್ರೆ ಮಂಜೂರು ಮಾಡುವಂತೆ ಈ ಹಿಂದಿನ ಶಾಸಕರು ಹಾಗೂ ಹಾಲಿ ಶಾಸಕರು ಒತ್ತಾಯ ಮಾಡಿದ್ದರು. ಈಗ ಆಸ್ಪತ್ರೆ ಮಂಜೂರಾಗಿದೆ. ಪಕ್ಷ ಬೇಧ ಮರೆತು ಅಭಿವೃದ್ಧಿ ಮಾಡಿದಾಗ ಮಾತ್ರ ರಾಜಕೀಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕರಿಗೆ ಕಿವಿ ಮಾತು ಹೇಳಿದರು. ಯಾವುದೇ ಪಕ್ಷದವರು ಬಂದರೂ ಅವರ ಕೆಲಸಗಳನ್ನು ಮಾಡಿಕೊಡಲಾಗುತ್ತಿದೆ
ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ಮೂಲ ಸೌಕರ್ಯಗಳಿಗೆ ಒತ್ತು ನೀಡುತ್ತಿದೆ. ತೂಬಗೆರೆ ಹೋಬಳಿಯಲ್ಲಿ 10 ಶಾಲೆಗಳು ಹಾಗೂ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಸಿಎಸ್‍ಆರ್ ಅನುದಾನದಲ್ಲಿ ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸರ್ಕಾರ ಆರಂಭಿಸಿದೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT