ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಯಲ್ಲಿ ಉದ್ಭವಿಸಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶೀಘ್ರ ಮೆಟ್ರೊ ಸಂಪರ್ಕ ಕಲ್ಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು. ವೇಗವಾಗಿ ಅಭಿವೃದ್ಧಿ ಕಾಣುತ್ತಿರುವ ಹೊಸಕೋಟೆಗೆ ಮೆಟ್ರೊ ಸಂಪರ್ಕ ಕಲ್ಪಿಸಲು ಶೀಘ್ರ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು. ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ದೇವನಹಳ್ಳಿ ದೊಡ್ಡಬಳ್ಳಾಪುರ ನೆಲಮಂಗಲ ತಾಲ್ಲೂಕುಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.