ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿದ್ಧತಾ ಕಾರ್ಯ ಆರಂಭಿಸಿದ್ದಾರೆ.

ನಗರದ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ನಗರಸಭೆ ವಾರ್ಡ್ವಾರು ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಉಪವಿಭಾಗಾಧಿಕಾರಿ ಅರುಳ್ಕುಮಾರ್ ನೀಡಿದರು.

ತಹಶೀಲ್ದಾರ್ ಟಿ.ಎಸ್.ಶಿವರಾಜು, ಡಿವೈಎಸ್ಪಿ ಟಿ.ರಂಗಪ್ಪ,ಸಮಾಜ ಕಲ್ಯಾಣ ಇಲಾಖೆ ಸೋಮಶೇಖರ್ ಹಾಗೂ ಚುನಾವಣೆ ಶಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಚುನಾವಣಾ ವೇಳಾಪಟ್ಟಿಯಂತೆ ಆ.16ರ ಸೋಮವಾರ ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಚುನಾವಣ ನೀತಿ ಸಂಹಿತೆ ಹಾಗೂ ನಾಮಪತ್ರಗಳ ಸಲ್ಲಿಕೆ ಸಮಯದಲ್ಲಿ ಕೋವಿಡ್ ಮಾರ್ಗ ಸೂಚಿಗಳು ಕಟ್ಟು ನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವ ಕುರಿತಂತೆ ಸೂಚನೆ ನೀಡಲಾಯಿತು. ಆ.23 ನಾಮಪತ್ರ ಸಲ್ಲಿಸಲು ಕೊನೆ ದಿನ. ಆ.24 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ.26 ಉಮೇದುವಾರಿಕೆ ಹಿಂತಗೆದುಕೊಳ್ಳಲು ಕೊನೆ ದಿನ. ಸೆ.3ರಂದು ಬೆಳಿಗ್ಗೆ 7ಗಂಟೆಯಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಸೆ.6ರಂದು ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಬೆಳಿಗ್ಗೆ 8ಗಂಟೆಯಿಂದ ಮತ ಏಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.