ಶುಕ್ರವಾರ, ಫೆಬ್ರವರಿ 26, 2021
27 °C

ಹಿರಿಯರನ್ನು ಕಡೆಗಣಿಸದಿರಿ: ಟಿ.ವೆಂಕಟರಮಣಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ‘ಹಿರಿಯರ ಮಾರ್ಗದರ್ಶನ ಮುಖ್ಯ. ಯುವಜನರು ಹಿರಿಯರನ್ನು ಕಡೆಗಣಿಸದೆ ಅವರ ಅನುಭವಗಳ ಆಧಾರದ ಮೇಲೆ ಮುನ್ನಡೆಯಬೇಕು’ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಇಲ್ಲಿನ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಅಂಗವಾಗಿ ಮಂಗಳವಾರ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವೃದ್ಧಾಪ್ಯದಲ್ಲಿ ಮಾನಸಿಕ ಒತ್ತಡ ಹೆಚ್ಚು ಕಾಡುತ್ತದೆ. ಇದನ್ನು ದೂರವಾಗಿಸಲು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಸದಾ ಯಾವುದಾದರೂ ಸಣ್ಣ ಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

‘ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದೆ. ಇದನ್ನು ಹಿರಿಯರು ಬಳಸಿಕೊಳ್ಳಬೇಕು. ಎಪಿಎಲ್ ಕಾರ್ಡ್ ಇದ್ದವರಿಗೆ ₹ 1.50 ಲಕ್ಷ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಲಭ್ಯ ಇದೆ. ಈ ಚಿಕಿತ್ಸೆಗೆ ಆಯ್ದ ಆಸ್ಪತ್ರೆಗಳಲ್ಲಿ ಮಾತ್ರ ಅವಕಾಶವಿದ್ದು ಆನಾರೋಗ್ಯದ ವೇಳೆ ಆತುರ ತೋರದೆ ಆಯ್ದ ಆಸ್ಪತ್ರೆಗಳಿಗೆ ದಾಖಲಾಗಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಸಿಡಿಪಿ ಅನಿತಾಲಕ್ಷ್ಮಿ, ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಕಾರ್ಯದರ್ಶಿ ಅಮಲಿನಾಯ್ಕ್‌, ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್.ಪ್ರಭಾ, ಕಾರ್ಯದರ್ಶಿ ದೇವಕಿ, ಖಜಾಂಚಿ ಯಶೋಧ, ನಿರ್ದೇಶಕಿ ವತ್ಸಲ, ಲೇಖಕ ಕೆ.ಮಹಾಲಿಂಗಯ್ಯ, ಸರ್ವೋದ್ಯ ಬಾಪೂಜಿ ವೃದ್ಧಾಶ್ರಮದ ಮುಖ್ಯಸ್ಥ ಗೋಪಾಲ್‌ರಾವ್, ಕಾರ್ಯಕ್ರಮ ಸಂಯೋಜಕ ಧರಣೀಶ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು