ದೊಡ್ಡಬಳ್ಳಾಪುರ: ದೇಶದ ಮಹಾನ್ ನಾಯಕರಾಗಿರುವ ಡಾ.ಬಾಬುಜಗಜೀವನ್ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಏಪ್ರಿಲ್ 14 ರಂದು ಒಂದೇ ವೇದಿಕೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ನಡೆದ ಡಾ.ಬಾಬುಜಗಜೀವನ್ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಇಬ್ಬರೂ ಮಹಾನ್ ನಾಯಕರು ದೇಶದ ಬಡವರು ಹಾಗೂ ಶೋಷಿತರ ಕಲ್ಯಾಣಕ್ಕಾಗಿ ಶ್ರಮಿಸಿದವರು. ಎರಡೂ ಜಯಂತಿ ಒಂದು ವಾರದ ಅಂತರದಲ್ಲಿದೇ ಇರುವುದರಿಂದ ಪ್ರತಿ ವರ್ಷದಂತೆ ಈ ಬಾರಿ ಒಟ್ಟಿಗೆ ಜಯಂತಿ ಆಚರಿಸಲಾಗುವುದು ಎಂದರು.

ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ಇತರೆ ಮುಖಂಡರನ್ನು ಒಳಗೊಂಡ ಸ್ವಾಗತ ಸಮಿತಿ ರಚಿಸಲಾಗುವುದು. ಏಪ್ರಿಲ್ 1 ರಂದು ಸ್ವಾಗತಿ ಸಮಿತಿಯು ಸಭೆ ನಡೆಸಿ ಸಮಾರಂಭ ನಡೆಸುವ ಸ್ಥಳ ಹಾಗೂ ಇತರೆ ಸಿದ್ದತೆಗಳ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಇಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಸರ್ಕಾರದ ನಿಯಮದಂತೆಯೇ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಜಯಂತಿಯನ್ನು ತಾಲ್ಲೂಕು ಕಚೇರಿಯಲ್ಲಿ ಆಚರಿಸಲಾಗುವುದು. ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿನ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಹಾಗೆಯೇ ಏಪ್ರಿಲ್ 14 ರಂದು ನಡೆಯುವ ಜಯಂತಿಯಲ್ಲಿ ಇಬ್ಬರ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಗುವುದು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-15-1272297981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.