ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣ ಜಯಂತ್ಯುತ್ಸವ ನಡೆಯಿತು.

ಬಸವಣ್ಣನವರ ವೈಚಾರಿಕ ನಿಲುವು ಕುರಿತು ಉಪನ್ಯಾಸ ನೀಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಬಸವಣ್ಣನವರು ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ, ವಿಶ್ವಗುರು ಮತ್ತು ಈ ನೆಲದ ಮೊದಲ ಸಾಮಾಜಿಕ ನ್ಯಾಯದ ಹೋರಾಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ ಎಂದು ತಿಳಿಸಿದರು.

ವಂಚಿತ ಸಮುದಾಯಗಳನ್ನು ತಬ್ಬಿಕೊಂಡು ನಡೆದದ್ದು ಬಸವ ಚಳುವಳಿ. ಎಲ್ಲ ಕಾಯಕಗಳಿಗೆ ವೃತ್ತಿ ಘನತೆ ತಂದು ಕೊಟ್ಟು ಅವುಗಳನ್ನು ಸತ್ಯಶುದ್ಧ ಕಾಯಕವೆಂದು ಗೌರವಿಸಿದವರು ಬಸವಣ್ಣನವರು. ಕನ್ನಡ ನೆಲದ ವೈಚಾರಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ನಾಯಕ ಎಂದರು.

ಶ್ರೀದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ತಳ ಸಮುದಾಯಗಳ ದನಿಯಾಗಿ, ಸಾಮಾಜಿಕ ಸಮಾನತೆ ಪ್ರತಿಪಾದಿಸಿದ ಬಸವಣ್ಣ ವಚನ ಮೂಲಕ ಸಮಾಜವನ್ನು ಎಚ್ಚರಿಸಿದರು. ಎಲ್ಲ ಕಾಲಕ್ಕೂ ಸಲ್ಲುವ ಮೌಲ್ಯ ಕಟ್ಟಿಕೊಟ್ಟಿದ್ದಾರೆ. ಇಂದಿಗೂ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುವುದು ವಿಷಾದನೀಯ ಎಂದರು.

ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್, ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್ಕುಮಾರ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ಡಾ.ಬಸವರಾಜ ಪಾಲ್, ಡಾ.ಪ್ರಚಲಿತ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವ್ಯವಸ್ಥಾಪಕ ಎಸ್.ಯತಿನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-15-432712555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.