ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಯಾಯ ವಿರುದ್ಧ ದನಿ ಎತ್ತದ ಬಿಜೆಪಿ ಸಂಸದರು

ದೊಡ್ಡಬಳ್ಳಾಪುರದಲ್ಲಿ ರಾಕ್ಷಾ ರಾಮಯ್ಯ
Published 18 ಏಪ್ರಿಲ್ 2024, 6:17 IST
Last Updated 18 ಏಪ್ರಿಲ್ 2024, 6:17 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ಅವರು ತಾಲ್ಲೂಕಿನ ವಿವಿಧೆಡೆಗಳಲ್ಲಿ ಬುಧವಾರ ರೋಡ್‌ ಶೋ ಹಾಗೂ ಪ್ರಚಾರ ಸಭೆ ನಡೆಸಿದರು.

ರಕ್ಷಾರಾಮಯ್ಯ ಅವರು ಕನಸವಾಡಿಯಲ್ಲಿನ ಶನಿಮಹಾತ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಚಾರ ಸಭೆ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾರಾಮಯ್ಯ, ಬಿಜೆಪಿಯವರು ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಕ್ಷೇತ್ರದ ಮತದಾರರು ಅವಕಾಶ ಕಲ್ಪಿಸಬಾರದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಭಾರೀ ಅನ್ಯಾಯಮಾಡುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ದೂರಿದರು.

ಪ್ರಚಾರ ಸಭೆಗಳಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ನಿರ್ದೇಶಕರಾದ ರಾಮಣ್ಣ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿವೆಂಕಟೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥರೆಡ್ಡಿ, ಎಂ.ಗೋವಿಂದರಾಜು, ಡಿ.ಸಿ.ಶಶಿಧರ್, ಟಿಎಪಿಎಂಸಿಎಸ್ ನಿರ್ದೇಶಕ ಎ.ಎನ್. ಹರೀಶ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT