ದೊಡ್ಡಬಳ್ಳಾಪುರ: ತಾಲ್ಲೂಕಿನ ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ.

ಈ ಕಾರು ಮಾರಸಂದ್ರ ಸುರೇಶ್ ಎಂಬುವರಿಗೆ ಸೇರಿದೆ. ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬ ಸದಸ್ಯರನ್ನು ಆಸ್ಪತ್ರೆಗೆ ಕರೆದೊಯ್ಯುವುದಾಗಿಪಕ್ಕದ ಮನೆಯ ರಾಮಾಂಜಿ ಎಂಬುವರು ಕಾರನ್ನು ತೆಗೆದುಕೊಂಡು ಹೋಗಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಕಿಯಿಂದ ಕಾರು ಸಂಪೂರ್ಣ ಭಸ್ಮವಾಗಿದ್ದು, ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾರು ಪಡೆದಿದ್ದ ರಾಮಾಂಜಿ ಪರಾರಿಯಾಗಿದ್ದಾನೆ.

ಅಸ್ಥಿ ಪಂಜರದ ಕೊರಳ ಭಾಗದಲ್ಲಿ ಚಿನ್ನದ ಸರದ ಮಾದರಿಯ ವಸ್ತು ಪತ್ತೆಯಾಗಿದೆ. ತಲೆಬುರುಡೆ ಹಾಗೂ ಕೈ ಕಾಲಿನ ಮೂಳೆಯ ಅವಶೇಷಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಾರು ಬೆಂಕಿಗೆ ಆಹುತಿಯಾದ ಸ್ಥಳದ ಸಮೀಪ ಇರುವ ನೀಲಗಿರಿ ತೋಪಿನಲ್ಲಿ ಚಾಲಕನ ಮೊಬೈಲ್ ಫೋನ್ ಮತ್ತು ಸ್ವಲ್ಪ ದೂರದಲ್ಲಿ ಅಂಗಿ ಪತ್ತೆಯಾಗಿವೆ.

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕಾರಿನ ಮಾಲೀಕ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-15-198396931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.