ದೊಡ್ಡಬಳ್ಳಾಪುರ: ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿಯ ಎಪಿಎಂಸಿ ಮಾರುಕಟ್ಟೆ ಸಮೀಪ ಗುರುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಾಲನಜೋಗಿಹಳ್ಳಿಯ ಪುರುಷೋತ್ತಮ (29) ಮೃತರು.

ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರನ ಕೆಳಗೆ ಬಿದ್ದ ಕೂಡಲೆ ಅವೆ ಮೇಲೆ ಬಸ್ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪಘಾತದಿಂದ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು. ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-15-138530495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.