ದೊಡ್ಡಬಳ್ಳಾಪುರ: ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂದಿರದಲ್ಲಿ ಬುಧವಾರ ಬಾಲ್ಯ ವಿವಾಹ ನಡೆಯುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ವಿವಾಹವನ್ನು ತಡೆದು ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದಾರೆ.

ಬುಧವಾರ ತಡ ರಾತ್ರಿ ಮಕ್ಕಳ ಸಹಾಯವಾಣಿ 1098ಕ್ಕೆ ಅಪರಿಚಿತರೊಬ್ಬರು ಕರೆ ಮಾಡಿ ನಗರದ ಕಲ್ಯಾಣ ಮಂಟಪವೊಂದರಲ್ಲಿ 16 ವರ್ಷದ ಬಾಲಕಿಗೆ ಬಾಲ್ಯ ವಿವಾಹ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ ಮಾರ್ಗದರ್ಶನದಲ್ಲಿ ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸರೊಂದಿಗೆ ತಡ ರಾತ್ರಿ ಸುಮಾರು 12.30ಕ್ಕೆ ಕಲ್ಯಾಣ ಮಂಟಪದ ದಾಳಿ ನಡೆಸಿದರು.

ಬಾಲಕಿಯ ಜನ್ಮದಿನದ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಆಧಾರ್ ಕಾರ್ಡ್ ಪ್ರಕಾರ ಬಾಲಕಿಯ ವಯಸ್ಸು 18 ವರ್ಷ ಆರು ತಿಂಗಳಾಗಿತ್ತು. ಅಧಿಕಾರಿಗಳು ಶಾಲಾ ದಾಖಲಾತಿ ಹಾಗೂ ಜನನ ದಾಖಲಾತಿಗಳನ್ನು ಮತ್ತೆ ಪರಿಶೀಲಿಸಿದಾಗ ಬಾಲಕಿಯ ವಯಸ್ಸು 16 ವರ್ಷ ಆರು ತಿಂಗಳಿಂದ ಕಂಡುಬಂದಿದೆ. ಮದುವೆಯ ಆರತಕ್ಷತೆ ಮುಗಿದು, ಬಾಲಕಿಗೆ ಬಳೆ ಶಾಸ್ತ್ರ ಹಾಗೂ ಇನ್ನಿತರ ಮದುವೆ ಶಾಸ್ತ್ರಗಳನ್ನು ಮಾಡಲಾಗುತಿತ್ತು. ಅಧಿಕಾರಿಗಳು ವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಣೆ ಮಾಡಿ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದೆ.

ಈ ವೇಳೆ ಮಕ್ಕಳ ಸಹಾಯವಾಣಿ ಸಂಯೋಜಕ ಶ್ರೀಧರ್, ಮೇಲ್ವಿಚಾರಕ ಮುನಿರಾಜು, ಸಮಾಜ ಕಾರ್ಯಕರ್ತ ಪ್ರಮೋದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-15-1213005273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.