ದೊಡ್ಡಬಳ್ಳಾಪುರ: ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂತಿವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

31 ಜನ ಸದಸ್ಯರನ್ನು ಹೊಂದಿರುವ ನಗರಸಭೆಯಲ್ಲಿ ಬಿಜೆಪಿ 12, ಜೆಡಿಎಸ್ 7, ಕಾಂಗ್ರೆಸ್ 9 ಹಾಗೂ ಪಕ್ಷೇತ್ರರ ಮೂವರು ಇದ್ದಾರೆ. ಜೆಡಿಎಸ್, ಬಿಜೆಪಿ ಮೈತ್ರಿಯೊಂದಿಗೆ ನಗರಸಭೆ ಆಡಳಿತ ನಡೆಯುತ್ತಿದ್ದು ಪೂರ್ವ ನಿಗದಿಯಂತೆ ಉಪಾಧ್ಯಕ್ಷ ಸ್ಥಾನವನ್ನು ಜೆಡಿಎಸ್ ಸದಸ್ಯರು ಬಿಜೆಪಿಗೆ ಅಭ್ಯರ್ಥಿಗೆ ಬಿಟ್ಟುಕೊಟ್ಟಿದ್ದಾರೆ. ಬಿಜೆಪಿ ಸದಸ್ಯೆ ಸುಮಿತ್ರಆನಂದ್ ಅಧ್ಯಕ್ಷರಾಗಿದ್ದಾರೆ. ನಗರಸಭೆಯ ನಾಲ್ಕು ತಿಂಗಳ ಆಡಳಿತಾವಧಿಯಲ್ಲಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ ಅಭ್ಯರ್ಥಿಗೆ ಬಿಟ್ಟುಕೊಡಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್ ಹಾಗೂ ನಗರಸಭೆಯ 23 ಜನ ಸದಸ್ಯ ಭಾಗವಹಿಸಿದ್ದರು. ಸಾಮಾನ್ಯ ಅಭ್ಯರ್ಥಿಗೆ ನಿಗದಿಯಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸದಸ್ಯ ಬಂತಿ ವೆಂಕಟೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆದಿದೆ.

ಕಾಂಗ್ರೆಸ್ ಸದಸ್ಯರು ಗೈರು: ಕಾಂಗ್ರೆಸ್ ಪಕ್ಷದ 8 ಸದಸ್ಯರು ಗೈರು ಹಾಜರಾಗಿದ್ದರು. ರಾಷ್ಟ್ರೀಯ ಪಕ್ಷವಾಗಿ 9 ಸದಸ್ಯರನ್ನು ಹೊಂದಿದ್ದರು ಸಹ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದೆ ಇರುವುದು ಕಾರ್ಯಕರ್ತರಲ್ಲಿ ತೀವ್ರ ಅಸಮದಾನಕ್ಕೆ ಕಾರಣವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-1219698541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.