ದೊಡ್ಡಬಳ್ಳಾಪುರ: ತಾಲ್ಲೂಕಿನ ಭೂಚನಹಳ್ಳಿ ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಮಾರಾಟಕ್ಕಾಗಿ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ–ಮಗ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು(55), ಕೇಶವ(18). ಮೃತದೇಹಗಳು ಇನ್ನು ಕೆರೆಯಲ್ಲಿ ನೀರಿನಲ್ಲಿ ಮುಳುಗಿದ್ದು ಪತ್ತೆಯಾಗಿಲ್ಲ.
ಕೆರೆಯ ಅಂಚಿನಲ್ಲಿ ಬಟ್ಟೆ, ಮೊಬೈಲ್ ಮತ್ತು ಚಪ್ಪಲಿ ಇಟ್ಟು ಕೆರೆಯಲ್ಲಿ ತಾವರೆ ಹೂವು ಕೀಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಮೊಬೈಲ್ ಮೂಲಕವೇ ಕುಟುಂಬಸ್ಥರನ್ನು ಸಂಪರ್ಕಿಸಿ ಮೃತರ ಬಗ್ಗೆ ಮಾಹಿತಿ ಪಡೆಯಲಾಗಿದೆ.
ಕತ್ತಲಾಗಿರುವ ಕಾರಣ ಮೃತ ದೇಹಗಳನ್ನು ಕೆರೆಯಲ್ಲಿ ಪತ್ತೆ ಮಾಡುವ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಗುರುವಾರ ಬೆಳಿಗ್ಗೆ ಮೃತ ದೇಹಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.