ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಡಿ.19ರ ಸಂಜೆ 5ರಿಂದ 21ರ ರಾತ್ರಿ 12 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21 ಹೇಮಾವತಿಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಎ.ಬಿ.ಬಸವರಾಜು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21 ಹೇಮಾವತಿಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21ಹೇಮಾವತಿಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ಡಿ.21 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಬೇಕಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಹಾಗೂ ನಗರಸಭೆಯ 21ನೇ ವಾರ್ಡ್ನ ಹೇಮಾವತಿಪೇಟೆ ವಾರ್ಡ್ ಉಪಚುನಾವಣೆ ಡಿ.21 ರಂದು ನಡೆಯಲಿದ್ದು ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಲಾಯಿತು. ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 19 ವಾರ್ಡ್ಗಳಿಂದ 19 ಹಾಗೂ ನಗರಸಭೆಯ 2 ಮತಗಟ್ಟೆ ಸೇರಿ 21 ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾನ ಶಾಂತಿಯುತವಾಗಿ ಪಾರದರ್ಶಕವಾಗಿ ನಡೆಯಲು ಮತಗಟ್ಟೆಅಧಿಕಾರಿಗಳ ಕಾರ್ಯಾಕ್ಷಮತೆ ಮಹತ್ವದ್ದಾಗಿದೆ. ಮತಗಟ್ಟೆಗೆ ಸರಿಯಾದ ಸಮಯಕ್ಕೆ ಹಾಜರಾಗಿ ಸಮಯ ಪಾಲನೆಗೆ ಒತ್ತು ನೀಡಬೇಕು. ನಿಗದಿತ ಸಮಯಕ್ಕೆ ಮತದಾನ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯವಾಗಬೇಕು ಎಂದು ತಿಳಿಸಿದರು. ಮತದಾನ ಪೂರ್ಣ ಪ್ರಮಾಣದಲ್ಲಿ ಆಗಿದ್ದರೂ ಸಹ ಅವಧಿಗಿಂತ ಮುಂಚೆಯೇ ಪ್ರಕ್ರಿಯೆಗಳನ್ನು ಮುಗಿಸಬಾರದು. ಮತದಾರರನ್ನು ಗುರುತಿಸುವುದು ಅಭ್ಯರ್ಥಿಗಳ ಏಜೆಂಟ್ ಅವರಿಗೆ ನೀಡಿರುವ ಜವಾಬ್ದಾರಿ ಲಕೋಟೆಗಳ ನಿರ್ವಹಣೆ ಸೇರಿದಂತೆ ಮತಗಟ್ಟೆಯಲ್ಲಿ ಪಾಲಿಸಬೇಕಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಚುನಾವಣೆಯ ಮುಖ್ಯ ತರಬೇತುದಾರರಾದ ಎನ್.ಶ್ರೀನಿವಾಸ್ ಮತಗಟ್ಟೆ ಅಧಿಕಾರಿಗಳು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣೆಗಾಗಿ ಮೀಸಲಿಟ್ಟಿರುವ ವಾಹನಗಳಲ್ಲಿಯೇ ಸಂಚರಿಸಬೇಕು. ಭದ್ರತೆ ಇಲ್ಲದೆ ಯಾವುದೇ ವಸ್ತುಗಳನ್ನು ಸಾಗಿಸಬಾರದು. ಮತದಾನ ಕೇಂದ್ರಗಳಲ್ಲಿಯಾಗಲೀ ಹೊರಗಾಗಲೇ ಅಭ್ಯರ್ಥಿಗಳ ಪರವಾಗಿ ನಡೆದುಕೊಳ್ಳಬಾರದು. ಮತಗಟ್ಟೆಗೆ ತೆರಳುವಾಗ ಹಾಗೂ ಮತಗಟ್ಟೆಯಲ್ಲಿ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮತಗಟ್ಟೆ ಸಿಬ್ಬಂದಿಗೆ ಚುನಾವಣೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಪೌರಾಯುಕ್ತ ಕಾರ್ತಿಕೇಶ್ವರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.