ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲೇ ಜಿಲ್ಲಾ ಆಸ್ಪತ್ರೆ ನಿರ್ಮಿಸಬೇಕು ಹಾಗೂ ಪೂರ್ಣಗೊಂಡಿರುವ ಇಎಸ್ಐ ಆಸ್ಪತ್ರೆಯನ್ನು ಕೂಡಲೇ ಉದ್ಘಾಟಿಸಬೇಕೆಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಮಾರ್ಚ್ ತಿಂಗಳಲ್ಲಿ ತಾವೇ ಶಂಕುಸ್ಥಾಪನೆ ನೆರವೇರಿಸಿದ್ದೀರಿ. ಕಾಮಗಾರಿಗೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ. ಸರ್ಕಾರಿ ಆಸ್ಪತ್ರೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸುವಂತೆ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದರು.

ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಪತ್ರ ನೀಡಲಾಗಿದೆ. ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ ಕಾಮಗಾರಿ ಆರಂಭವಾಗಿಲ್ಲ ಎಂದು ತಿಳಿಸಿದರು.

ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಇಎಸ್ಐ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡು ನಾಲ್ಕು ವರ್ಷಗಳು ಕಳೆದರೂ ಉದ್ಘಾಟನೆ ಮಾತ್ರ ಆಗಿಲ್ಲ. 12 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಅನುಕೂಲ ಆಗಲಿರುವ ಇಎಸ್ಐ ಆಸ್ಪತ್ರೆಯ ಸೇವಾ ಆರಂಭಕ್ಕೆ ಚಾಲನೆ ದೊರೆಯಬೇಕಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.