ದೊಡ್ಡಬಳ್ಳಾಪುರ: ನಾಲ್ಕು ವರ್ಷ ನಿರಂತರ ಕಾರ್ಮಿಕ ಸಂಘಟನೆಗಳ ಹೋರಾಟದ ಬಳಿಕ ಇಎಸ್ಐ ಆಸ್ಪತ್ರೆ ಉದ್ಘಾಟನೆಗೆ ಕೊನೆಗೂ ಗ್ಯಾರಂಟಿ ಸಿಕ್ಕಿದೆ. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಇಎಸ್ಐಸ ಆಸ್ಪತ್ರೆಯನ್ನು ಮೇ 3ರಂದು ವರ್ಚುವಲ್ ಮೂಲಕ ಉದ್ಘಾಟಿಸಲಾಗುತ್ತದೆ.

2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಆಮೆ ವೇಗದಲ್ಲಿ ಮುಕ್ತಾಯವಾಗಿತ್ತು. ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಆಗಿರಲಿಲ್ಲ. ಇದರಿಂದ ಕಾರ್ಮಿಕರು ಬೆಂಗಳೂರಿನ ಇಎಸ್ಐ ಹಾಗೂ ಖಾಸಗೆ ಆಸ್ಪತ್ರೆಗೆ ಅಲೆಯಬೇಕಿತ್ತು. ಉದ್ಘಾಟನೆಗೆ ಒತ್ತಾಯಿಸಿದ ನಾಲ್ಕು ವರ್ಷ ಹಲವು ಕಾರ್ಮಿಕ ಸಂಘಟನೆಗಳ ನಿಂತರ ಪ್ರತಿಭಟನೆ ನಡೆಸಿದವು.

ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಐದು ಹಂತಗಳಲ್ಲಿ ವಿಸ್ತರಣೆಯಾಗಿ ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸಹ ಕಾರ್ಮಿಕರು ಇಎಸ್ಐ ಆಸ್ಪತ್ರೆ ಸೌಲಭ್ಯಕ್ಕಾಗಿ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಇಎಸ್ಐ ಆಸ್ಪತ್ರೆ ಕಾರ್ಯಾರಂಭ ಮಾಡುವೆಂತೆಯು ಹಲವಾರು ಬಾರಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಮಾಡಿದ್ದರು. ತಾಲ್ಲೂಕಿನ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದ್ದ ಸಂದರ್ಭದಲ್ಲೂ ಮನವಿಗಳನ್ನು ಸಲ್ಲಿಸಿದ್ದರು. ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಿ ಆಸ್ಪತ್ರೆಗೆ ಅಗತ್ಯ ಉಪಕರಣಗಳ ಅಳವಡಿಕೆಯ ನಂತರವು ಆರ್ಥಿಕ ನೆರವಿನ ಕೊರತೆಯಿಂದಾಗಿ ಸಿಬ್ಬಂದಿ ನೇಮಕವಾಗದೆಯು ಎರಡು ವರ್ಷಗಳಿಂದಲು ಆಸ್ಪತ್ರೆಯಲ್ಲಿನ ಉಪಕರಣಗಳು ಧೂಳು ಹಿಡಿಯುತ್ತಿದ್ದವು.

ಕೇಂದ್ರ ಕಾರ್ಮಿಕ, ಉದ್ಯೋಗ, ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವಿಯ ಅವರು ವರ್ಚುವಲ್ ಮೂಲಕ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಕಾರ್ಮಿಕ, ಉದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಸಂಸತ್ ಸದಸ್ಯ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಆಸ್ಪತ್ರೆ ನಿರ್ಮಾಣದಲ್ಲಿ ಪಾಲ್ಗೊಂಡ ಕಾರ್ಮಿಕರನ್ನು ಸನ್ಮಾನಿಸತ್ತದೆ. ಇಎಸ್ಐ ಫಲಾನುಭವಿಗಳಿಗೆ ನಗದು ಸಹಾಯ ವಿತರಿಸಲಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-15-645025734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.