ದೊಡ್ಡಬೆಳವಂಗಲ(ದೊಡ್ಡಬಳ್ಳಾಪುರ): ದೊಡ್ಡಬೆಳವಂಗಲ ಹೋಬಳಿಯಲ್ಲಿ ಫಲವತ್ತಾದ 2,100 ಎಕರೆ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು ಬುಧವಾರ ಇಲ್ಲಿನ ನಾಡಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ 648ರಲ್ಲಿನ ಖಾನಿಮಠದಿಂದ ನೂರಾರು ಸಂಖ್ಯೆಯಲ್ಲಿ ಜಾಥಾ ಮೂಲಕ ಆಗಮಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದೊಡ್ಡಬೆಳವಂಗಲದ ನಾಡಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕೃಷಿಯನ್ನು ಸಂಪೂರ್ಣವಾಗಿ ನಾಶಮಾಡುವ ಮೂಲಕ ರೈತರು ಗೂಳೆ ಹೋಗುವಂತೆ ಮಾಡುವ ಹುನ್ನಾರ ನಡೆಸುತ್ತಿದೆ. ಈಗಾಗಲೇ ದೊಡ್ಡಬೆಳವಂಗಲ ಹೋಬಳಿಯಲ್ಲಿ ಕ್ವಿನ್ ಸಿಟಿ, ಹೈಟೆಕ್ ಲಾಜಿಸ್ಟಿಕ್ ಪಾರ್ಕ್, ಕಸ ವಿಲೇವಾರಿ ಘಟಕ ಸೇರಿದಂತೆ ಹತ್ತಾರು ಯೋಜನೆಗಳ ನೆಪದಲ್ಲಿ ಸುಮಾರು 4,500 ಎಕರೆ ಕೃಷಿ ಭೂಮಿಯನ್ನು ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಸ್ಥಳೀಯ ಮುಖಂಡರಾದ ಪ್ರಭಾಬೆಳವಂಗಲ ದೂರಿದರು.

ಈಗಾಗಲೇ ಸ್ವಾಧೀನ ಮಾಡಿಕೊಂಡಿರುವ ಭೂಮಿಯಲ್ಲಿ ಇನ್ನೂ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ. ಈಗ ಮತ್ತೆ ಹೊಸದಾಗಿ 2,100 ಎಕರೆ ಕೃಷಿ ಭೂಮಿಸ್ವಾಧೀನಕ್ಕೆ ಕೆಐಎಡಿಬಿ ಸಭೆ ನಡೆಸಿ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ಜಮೀನು ಗುರುತಿಸಿದೆ ಎಂದರು.

ಭೂಸ್ವಾಧಿನಕ್ಕೆ ಗುರುತಿಸಿರುವ ಶೇ 80ರಷ್ಟು ಜಮೀನಿನಲ್ಲಿ ರೈತರು ಬ್ಯಾಂಕ್ಗಳಿಂದ ಸಾಲ ಪಡೆದು ಕೊಳವೆಬಾವಿಗಳನ್ನು ಕೊರೆಸಿ ನೀರು ಮೇಲೆತ್ತಿ ಅಡಿಕೆ, ತೆಂಗು, ಬಾಳೆ,ಹೂವು,ರಾಗಿ,ಜೋಳೆ ಸೇರಿದಂತೆ ಹತ್ತಾರು ರೀತಿಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ ಕಂದಾಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಈ ಪ್ರದೇಶವು ಖಾಲಿ ಭೂಮಿ ಎಂದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ಥಳೀಯ ಮುಖಂಡರು ಸೇರಿದಂತೆ ಭೂಸ್ವಾಧೀನಕ್ಕೆ ಒಳಪಡುತ್ತಿರುವ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-15-93772557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.