ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕೆಐಡಿಎಬಿಯಿಂದ 2,100 ಎಕರೆ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರು ಗುರುವಾರ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಫಲವತ್ತಾದ ಕೃಷಿ ಭೂಮಿ ನಮ್ಮ ಬದುಕಿನ ಆಧಾರ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು. ನಮ್ಮ ಭೂಮಿ ನಮಗೇ ಉಳಿಯಬೇಕು. ಒಂದು ವೇಳೆ ಸರ್ಕಾರ ಇದೇ ರೀತಿಯಲ್ಲಿ ಮುಂದುವರಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ರೈತರು ಎಚ್ಚರಿಕೆ ನೀಡಿದರು.

ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ, ಸೊಣ್ಣೇನಹಳ್ಳಿ, ನಾರಾನಹಳ್ಳಿ ಸೇರಿದಂತೆ ಐದು ಗ್ರಾಮದಲ್ಲಿ ಸುಮಾರು 2,100 ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ನಾಡಕಚೇರಿ ಮುಂಭಾಗ ನಡೆಸುತ್ತಿರುವ ಅನಿದಿರ್ಷ್ಟಾವಧಿ ಪ್ರತಿಭಟನೆ 44 ದಿನ ಪೂರೈಸಿದೆ. ಆದರೂ ಸರ್ಕಾರ ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಗುರುವಾರ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.

ಭೂ ಸ್ವಾಧೀನ ವಿರೋಧಿ ಹೋರಾಟ ಕೇಂದ್ರದವಾದದೊಡ್ಡಬೆಳವಂಗಲದಿಂದ ದೇವನಹಳ್ಳಿಯ ಜಿಲ್ಲಾಡಳಿತ ಭವನದವರೆಗೆ ನಡೆದ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು. 100ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಲ್ಲಿ ರೈತರು ಭಾಗವಹಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಸರ್ಕಾರ ಹಾಗೂ ಕೆಐಎಡಿಬಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ರೈತರು ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದರು.

ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠ ಮಂಗಳನಾಥಸ್ವಾಮೀಜಿ, ವೈದ್ಯ ಡಾ.ಎಚ್.ಆಂಜನಿಪ್ಪ, ಭೂಸ್ವಾಧೀನ ವಿರೋದಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಕಾರ್ಯಾಧ್ಯಕ್ಷ ಎಸ್.ಸುನಿಲ್ಕುಮಾರ್,ಉಪಾಧ್ಯಕ್ಷ ಸಿ.ಆರ್.ತಿಮ್ಮೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಎಚ್.ರಾಮಕೃಷ್ಣಯ್ಯ, ಖಜಾಂಜಿ ಸಿ.ಎಸ್. ಧರ್ಮೇಂದ್ರ, ಹೋರಾಟ ಸಮಿತಿ ಮಾರ್ಗದರ್ಶಕಿ ಪ್ರಭಾಬೆಳವಂಗಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-15-1923601018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.