ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಮಾಮ್ ಗ್ರಾಮದ ಕೊಳವೆ ಬಾವಿ ಕೊರೆಯುವ ಲಾರಿ ನಿಲುಗಡೆ ಮಾಡಿದ್ದ ಶೆಡ್‌ನಲ್ಲಿ ಮಂಗಳವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬೋರ್‌ವೆಲ್ ಸಪೋರ್ಟ್ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಒಂದು ಬೋರ್ ವೆಲ್ ಸಪೋರ್ಟ್ ಲಾರಿ ಸೇರಿದಂತೆ ಸುಮಾರು ₹2 ಕೋಟಿ ಮೌಲ್ಯದ ವಸ್ತು ಭಸ್ಮವಾಗಿವೆ ಎಂದು ಸ್ಥಳೀಯ ನಿವಾಸಿ ವೆಂಕಟೇಶ್ ತಿಳಿಸಿದ್ದಾರೆ.

ತಮಿಳುನಾಡು ಮೂಲದ ಬೋರ್‌ವೆಲ್ ಲಾರಿ ಮಾಲೀಕ ಹಮಾಮ್ ಬಳಿ 8 ವರ್ಷಗಳ ಹಿಂದೆ ಬಾಡಿಗೆ ಸ್ಥಳದಲ್ಲಿ ಶೆಡ್ ನಿರ್ಮಿಸಿಕೊಂಡು ಬೋರ್‌ವೆಲ್ ಲಾರಿ ಹಾಗೂ ಬೋರ್ ವೆಲ್‌ಗೆ ಸಂಬಂಧಪಟ್ಟ ವಸ್ತುಗಳನ್ನು ಇರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.