ದೊಡ್ಡಬಳ್ಳಾಪುರ: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಸರ್ಕಾರಿ ಸ್ವಾಮ್ಯದ ಮಾರಾಟ ಕಂಪನಿಗಳು ಕಳೆದ ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿವೆ. 11 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರವು ಸರಿ ಸುಮಾರು ₹7 ಏರಿಕೆಯಾಗಿದೆ.

ಇದರಿಂದ ಜನಸಾಮಾನ್ಯರ ಜೋಬಿಗೆ ಕತ್ತರಿ ಬಿದ್ದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ ಶೇ20ರಷ್ಟು ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ5 ರಷ್ಟು ಏರಿಕೆಯಾದರೆ ತೈಲೋತ್ಪನ್ನಗಳ ಕಂಪನಿಗಳು ನಷ್ಟಕ್ಕೆ ಸಿಲುಕಲಿವೆ ಎಂದು ರಾತ್ರೋರಾತ್ರಿ ಬೆಲೆ ಏರಿಕೆ ಮಾಡುವ ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲೋತ್ಪನ್ನಗಳ ಬೆಲೆ ಶೇ20ರಷ್ಟು ಕುಸಿದರೂ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ದೂರಿದರು.

ಈಗಾಗಲೇ ವಾಣಿಜ್ಯ ಗ್ಯಾಸ್ ಸಿಲೆಂಡರ್ ಬೆಲೆ ಒಂದು ಸಿಲಿಂಡರ್ಗೆ ₹1ಸಾವಿರ ಹೆಚ್ಚಳವಾಗಿದೆ. ಇದರ ನೇರ ಪರಿಣಾಮ ಜನಸಾಮಾನ್ಯರಿಗೆ ಬೀಳುತ್ತಿದೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಕ್ಷುಲ್ಲಕ ವಿಚಾರಗಳ ಬಗ್ಗೆ ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದೆ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ದರ ಹೆಚ್ಚಳವಾಗಿದೆ. ಇದರ ಪರಿಣಾಮ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಜನರು ದನಿ ಎತ್ತಬೇಕಿದೆ ಎಂದರು.

ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಮಾತನಾಡಿ, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ. ವಿದೇಶಾಂಗ ನೀತಿಗಳಿಂದ ದೇಶಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೃಷಿ ನೀತಿಗಳು ರೈತರಿಗೆ ಮಾರಕವಾಗಿವೆ. ಇದರೊಂದಿಗೆ ದೇಶದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಂಡರ್ ಬೆಲೆ ಏರಿಕೆಯಾಗುತ್ತಿದೆ. ಜನ ಸಾಮಾನ್ಯರಿಗೆ ಭಾರಿ ಹೊಡೆತ ನೀಡುತ್ತಿದೆ. ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ಗೌರವ ಅಧ್ಯಕ್ಷ ಆರ್.ರಂಗನಾಥ್, ತಾಲ್ಲೂಕು ಅಧ್ಯಕ್ಷ ಡಿ.ವೆಂಕಟೇಶ್, ಶಿವರಾಜ್ಕುಮಾರ್ ಸೇನಾ ಸಮಿತಿ ತಾಲ್ಲೂಕು ಅಧ್ಯಕ್ಷ ರಮೇಶ್, ಕನ್ನಡ ಪಕ್ಷದ ಮುಖಂಡರಾದ ಎಂ.ಜಿ.ಬೋರೇಗೌಡ, ಮುದ್ದುಕೃಷ್ಣ, ಉಮಾಶಂಕರ್, ಕೆ.ಎನ್.ಕುಮಾರ್, ನರಸಿಂಹಮೂರ್ತಿ, ಮಂಜುನಾಥ್, ಕರಾಟೆ ಶ್ರೀನಿವಾಸ್, ರಾಜಣ್ಣ, ಜಿ.ರಾಮು, ರಾಜ್ಯ ರೈತ ಸಂಘದ ಮುಖಂಡರಾದ ಹನುಮೇಗೌಡ, ಪ್ರಸನ್ನ, ರವಿಶಿರವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-2142153781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.