ದೊಡ್ಡಬಳ್ಳಾಪುರ: ನಗರದ ಚಿಕ್ಕಪೇಟೆಯ ಇತಿಹಾಸ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಗುರುವಾರ ಬೆಳಗ್ಗೆ ಸಂಭ್ರಮದಿಂದ ನಡೆಯಿತು.

ಹಸಿ ಕರಗ ಉತ್ಸವವನ್ನು ಸಹಸ್ರಾರು ಜನ ವೀಕ್ಷಿಸಿದರು. ಹೊಸಕೋಟೆ ತಾಲ್ಲೂಕಿನ ಉಪ್ಪಾರಹಳ್ಳಿ ಪೂಜಾರಿ ವೈ.ಭೀಮರಾಜ್ ಹಸಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೇ ಬಸ್ ನಿಲ್ದಾಣ, ಶ್ರೀನೆಲದಾಂಜನೇಯಸ್ವಾಮಿ ದೇವಾಲಯ, ಏಳು ಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಮುಂತಾದ ಕಡೆಗಳಲ್ಲಿ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು. ಮೇ 1 ರಂದು ಶುಕ್ರವಾರ ರಾತ್ರಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿದೆ.

ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕಾರ, ಬೃಹತ್ ಕಟೌಟು ಮೆರುಗು ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-1150746714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.