ದೊಡ್ಡಬಳ್ಳಾಪುರ: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರ ಜೀವನಮೌಲ್ಯಗಳು ಮಾನವ ಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ವೇಮನರೆಡ್ಡಿ ಹಾಗೂ ಹೇಮರಡ್ಡಿ ಮಲ್ಲಮ್ಮ ಅವರು ಒಂದೇ ಜನಾಂಗದವರಾಗಿದ್ದರೂ ಪ್ರಾದೇಶಿಕ ಭಿನ್ನತೆಯಿಂದ ವಿಚಾರಗಳಲ್ಲಿ ವ್ಯತ್ಯಾಸಗಳಿವೆ ಎಂದು ತಿಳಿಸಿದರು.

ತನಗಾಗಿ ಏನನ್ನೂ ಬೇಡದ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕಾಗಿ ಮತ್ತು ನಿಸ್ವಾರ್ಥದಿಂದ ಬದುಕಿದವರು. ಮಾನವ ಕುಲದ ಜೀವಲೋಕದ ಮಹಾತಾಯಿ ಹೇಮರೆಡ್ಡಿ ಮಲ್ಲಮ್ಮ. ಕೌಟುಂಬಿಕ ಕಲಹಗಳ ನಡುವೆ ಕಷ್ಟಗಳು ಅವಮಾನ ಸಹಿಸಿಕೊಂಡು ಬದುಕಿದ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ಮಹಾಸಾದ್ವಿ. ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ಇಂತಹ ಮಹನೀಯರು ಆದರ್ಶವಾಗಬೇಕಿದೆ ಎಂದರು.

ಶ್ರೀವೇಮನ ರೆಡ್ಡಿ ಜನಸಂಘದ ಅಧ್ಯಕ್ಷ ಎಂ.ಜಗದೀಶ್ರೆಡ್ಡಿ, ಸುಮಾರು 500 ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದ ಹೇಮರೆಡ್ಡಿ ಮಲ್ಲಮ್ಮ, ಶ್ರೀಶೈಲ ಮಲ್ಲಿಕಾರ್ಜುನನನ್ನು ತನ್ನ ಆರಾಧ್ಯ ದೈವವಾಗಿ ಆರಾಧಿಸಿ, ಅವರನ್ನು ಸಾಕ್ಷಾತ್ಕರಿಸಿಕೊಂಡ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದರು ಎಂದು ತಿಳಿಸಿದರು.

ರೆಡ್ಡಿ ಜನಾಂಗದ ಹಿರಿಯ ಮುಖಂಡ ಎಂ.ನಾರಾಯಣ ರೆಡ್ಡಿ, ಶಿಕ್ಷಕ ಮಲ್ಲಿಕಾರ್ಜುನ ರೆಡ್ಡಿ ,ಶ್ರೀ ವೇಮನ ರೆಡ್ಡಿ ಜನಸಂಘದ ಸಂಘಟನಾ ಕಾರ್ಯದರ್ಶಿ ಎನ್. ರಾಮಾಂಜಿನಪ್ಪ, ಉಪಾಧ್ಯಕ್ಷ ಎನ್. ಶಿವಾರೆಡ್ಡಿ, ಪ್ರದಾನ ಕಾರ್ಯದರ್ಶಿ ಕೆ.ಎನ್.ಹನುಮಂತರೆಡ್ಡಿ ಅವರನ್ನು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸನ್ಮಾನಿಸಲಾಯಿತು.

ಸಮುದಾಯದ ಮುಖಂಡರಾದ ಎಂ.ನಾರಾಯಣ ರೆಡ್ಡಿ,ಎಳ್ಳುಪುರ ಶಿವಾರೆಡ್ಡಿ ಸೇರಿದಂತೆ ರೆಡ್ಡಿ ಸಮುದಾಯದ ಮುಖಂಡರು ತಾಲ್ಲೂಕು ಆಡಳಿತ ವರ್ಗದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-15-1827377456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.