ದೊಡ್ಡಬಳ್ಳಾಪುರ: ಪಕ್ಷದ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕ ಮೇ8ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ 25ರ ಸಂಭ್ರಮಾಚರಣೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ಮಂಜುನಾಥ್ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಮುನೇಗೌಡ ಸಂಘಟನೆಯಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮ ನಡೆಸಲಾಗುತ್ತಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಪದಾಧಿಕಾರಿಗಳ ಆಯ್ಕೆ ಸಮಯದಲ್ಲಿ ಎಲ್ಲ ಪಕ್ಷಗಳಲ್ಲಿ ಇರುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಒಂದಿಷ್ಟು ಅಸಮಾಧಾನ ಇದೆ. 25ರ ಸಂಭ್ರಮಾಚರಣೆಗೆ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ಕುಮಾರ್ಸ್ವಾಮಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು. ಈಗಾಗಲೇ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹರೀಶ್ಗೌಡ ಪಕ್ಷದ ಹಿರಿಯ ಮುಖಂಡರ ಮನೆಗಳಿಗೂ ಭೇಟಿ ನೀಡಿ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ಗೌಡ ಮಾತನಾಡಿ, ಕಾರ್ಯಕ್ರಮಕ್ಕೆ ತಾಲ್ಲೂಕಿನ ಪಕ್ಷದ ಎಲ್ಲ ಹಿರಿಯ ಹಾಗೂ ಯುವ ಮುಖಂಡರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನಿಸಲಾಗಿದೆ. ಸದ್ಯದಲ್ಲೇ ಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಈ ಸಮಾವೇಶ ಕಾರ್ಯಕರ್ತರಿಗೆ ಶಕ್ತಿ ತುಂಬದಲಿದೆ ಎಂದರು.

ಮುಖಂಡರಾದ ಟಿ.ಎನ್.ಪ್ರಭುದೇವ್, ಡಾ.ವಿಜಯಕುಮಾರ್, ಆನಂದ್, ಜಿ.ಸತ್ಯನಾರಾಯಣ್, ಅಶ್ವತ್ಥ್ನಾರಾಯಣಗೌಡ, ನಟರಾಜ್, ವಿ.ಆಂಜನೇಗೌಡ, ಆರ್.ಕೆಂಪರಾಜ್, ತಳವಾರ್ ನಾಗರಾಜ್, ನಾರಾಯಣಪ್ಪ, ಗೋವಿಂದರಾಜ್, ನರಸಿಂಹಗೌಡ,ಪ್ರವೀಣ್,ಅಶ್ವತ್ಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.