ಗುಂಡಮಗೆರೆ(ದೊಡ್ಡಬಳ್ಳಾಪುರ): ಜೆಡಿಎಸ್ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕದ ಬಳಿಕ ತಾಲ್ಲೂಕು ಘಟಕದಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಹೋಬಳಿವಾರು ಸಭೆಗಳು ಆರಂಭವಾಗಿವೆ.

ಸಾಸಲು ಹೊಭಳಿಯ ಗುಂಡಮಗೆರೆಯಲ್ಲಿ ನಡೆದ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ಹುಸ್ಕೂರು ಆನಂದ್, ತಾಲ್ಲೂಕಿನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಜೆಡಿಎಸ್ ಜಿಲ್ಲಾ ನೂತನ ಅಧ್ಯಕ್ಷ ಕೆ.ವಿ.ಮಂಜುನಾಥ್ ಅವರು ಅಧಿಕಾರ ನೀಡುವ ಮೂಲಕ ತಾಲ್ಲೂಕಿನ ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರನ್ನು ನಿರಾಸೆಗೊಳಿಸಿದ್ದಾರೆ ಎಂದು ಅಸಮಾಧಾನಗೊಳಿಸಿದರು.

ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ ತಾಲ್ಲೂಕಿನ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರೊಂದಿಗೆ ಶಾಮೀಲಾಗಿ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಪಕ್ಷವನ್ನು ಸರ್ವನಾಶ ಮಾಡಲು ಮುಂದಾಗಿದ್ದಾರೆ. ನಾಲ್ಕು ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲು ಕಂಡಿದ್ದರು ಸಹ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಬಿ.ಮುನೇಗೌಡ ಅವರೊಂದಿಗೆ ತಾಲ್ಲೂಕಿನ ಜೆಡಿಎಸ್ ಬೆಂಬಲಿಗರು ಇರುವುದಕ್ಕೆ ಸಾಸಲು ಹೋಬಳಿಯಲ್ಲಿ ನಡೆಯುತ್ತಿರುವ ಈ ಸಭೆ ಸಾಕ್ಷಿಯಾಗಿದೆ. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗುವುದು. ನಂತರ ಪಕ್ಷ ವಿರೋದಿ ಚಟುವಟಿಕೆ ಮಾಡಿದವರಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಿ.ಮುನೇಗೌಡ ಅವರನ್ನು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಏಕಾಏಕಿ ಕೆಳಗಿಳಿಸಿರುವುದಕ್ಕೆ ಸಾಸಲು ಹೋಬಳಿಯ ಪಕ್ಷದ ಕಾರ್ಯಕರ್ತರು ತೀವ್ರ ಅಸಮಧಾನಗೊಂಡಿದ್ದಾರೆ. ಸಾಸಲು ಹೋಬಳಿ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ ಎಂದರು.

ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಮುಖಂಡರಾದ ಪುಟ್ಟರಾಜ್, ನರಸಿಂಹಗೌಡ, ಶಿವಣ್ಣ, ಕೆಂಪರಾಜ್, ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-1184348334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.