ದೊಡ್ಡಬಳ್ಳಾಪುರ: ಜೆಡಿಎಸ್ ಹೆಸರು ಹೇಳಿಕೊಂಡು ತಿರುಗಾಡುವ ಹಸ್ಕೂರ್ ಆನಂದ್ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿ ನಿಷ್ಠಾವಂತ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಾಮಮೂರ್ತಿ ಅವರಿಗೆ ಕೆಸ್ತೂರು ವಿಎಸ್ಎಸ್ಎನ್ ಅಧ್ಯಕ್ಷ ಸ್ಥಾನ ತಪ್ಪುವಂತೆ ಮಾಡಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ಗೌಡ ಆರೋಪಿಸಿದರು.

ಕೆಸ್ತೂರು ಗ್ರಾಮ ಪಂಚಾಯಿತಿ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ ಇತ್ತೀಚಿನ ಬೆಳವಣಿಗೆಯಿಂದ ಜೆಡಿಎಸ್ ಪಕ್ಷ ಎರಡು ಬಣಗಳಾಗಿವೆ. ಆಂತಕರಿಕ ಬೇಗುದಿಯಿಂದ ಪಕ್ಷದ ಅಭ್ಯರ್ಥಿಗೆ ದೊರೆಯಬೇಕಿದ್ದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತರ ಪಾಲಿಗಿದೆ. ಕಾಂಗ್ರೆಸ್ ಮುಖಂಡರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಹುಸ್ಕೂರ್ ಆನಂದ್ ಅವರು ಅಧ್ಯಕ್ಷರಾಗಿ ಮಾಡುವುದಾಗಿ ಕೊಟ್ಟ ಮಾತಿಗೆ ತಪ್ಪಿದ್ದಾರೆ. ಅವರ ಮಾತು ನಂಬಿ ಮಗನ ಲಗ್ನ ಪತ್ರಿಕೆಯಲ್ಲಿ ಕೆಸ್ತೂರು ವಿ.ಎಸ್.ಎಸ್.ಎನ್ ಅಧ್ಯಕ್ಷ ಎಂದು ಮುದ್ರಿಸಿದ್ದೆ. ಈಗ ಅವರು ಕೊನೆ ಕ್ಷಣದಲ್ಲಿ ಬೇರೆಯವರನ್ನು ಅಧ್ಯಕ್ಷರಾಗಿ ಮಾಡಿ ನನಗೆ ಮೋಸ ಮಾಡಿದ್ದಾರೆ’ ಎಂದು ಅಧ್ಯಕ್ಷ ಸ್ಥಾನದ ಅಂಕಾಕ್ಷಿಯಾಗಿದ್ದ ರಾಮಮೂರ್ತಿ ಅಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ತಾಲ್ಲೂಕು ಕಾರ್ಯಾಧ್ಯಕ್ಷ ವಿ.ಆಂಜನಗೌಡ, ಟಿಎಪಿಎಂಸಿಎಸ್ ನಿರ್ದೇಶಕ ಆನಂದ್, ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್, ಮುಖಂಡರಾದ ಗೋವಿಂದರಾಜ್, ಬ್ಯಾಡರಹಳ್ಳಿ ನಟರಾಜ್, ಕೆಂಪರಾಜ್, ಅಶ್ವತ್ಥನಾರಾಯಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-15-1250602153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.