ದೊಡ್ಡಬಳ್ಳಾಪುರ: ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ ಥಾರ್ ಜೀಪ್ ಮರಕ್ಕೆ ಡಿಕ್ಕಿ ಹೊಡೆದು ಜೀಪಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗ್ಗೆ ಸುಮಾರು 5.30ರ ವೇಳೆ ಸ್ಕೌಟ್ ಕ್ಯಾಂಪ್ ಕಡೆಯಿಂದ ಬಂದ ಕಾರು ಖಾಸಗಿ ಬ್ಯಾಂಕ್ ಸಮೀಪ ನಾಯಿ ಅಡ್ಡ ಬಂದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಆಂಧ್ರಪ್ರದೇಶದ ಮೂವರು ಯುವತಿಯರು, ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಕಾರಿನ ಚಾಲಕ ಹಾಗೂ ಮತ್ತೋಬ್ಬರ ಯುವಕನ ಸ್ಥಿತಿ ಗಂಭೀರವಾಗಿದೆ.

ಬಾಶೆಟ್ಟಿಹಳ್ಳಿ ಸಮೀಪದ ಪಿಜಿಯಲ್ಲಿ ವಾಸವಿದ್ದ ಇವರು ಭಾನುವಾರದ ರಜೆ ಹಿನ್ನೆಲೆ ಸ್ವಂತ ಊರಿಗೆ ತೆರಳಿ ಸೋಮವಾರ ಹಿಂತಿರುಗಿ ಬರುವ ವೇಳೆ ಅಪಘಾತ ಸಂಭವಿಸಿದೆ. ಗಾಯಗೊಂಡವರ ಪೂರ್ಣ ವಿಳಾಸ,ಹೆಸರುಗಳು ತಿಳಿದು ಬಂದಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-16-956860409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.