ದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಹತ್ವದ ಕೊಡುಗೆ ನೀಡಿದೆ ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ಹೇಳಿದರು.

ನಗರದ ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

1915ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಅಸ್ಮಿತೆ ಎತ್ತಿ ಹಿಡಿಯುತ್ತಾ ಬರುತ್ತಿದೆ. ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರು ಈ ಸಂಸ್ಥೆಯನ್ನು ಸ್ಥಾಪಿಸಿ ಪ್ರವರ್ಧಮಾನಕ್ಕೆ ತಂದ ಮೂಲಪುರುಷರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡ ನಾಡು ನುಡಿ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳು, ದತ್ತಿ ಉಪನ್ಯಾಸ, ಪುಸ್ತಕ ಮುದ್ರಣ, ಪುಸ್ತಕ ಬಿಡುಗಡೆ ಮುಂತಾದ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ಶತಮಾನ ಪೂರೈಸಿ, ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿ ಸಶಕ್ತವಾಗಿ ಮುನ್ನಡೆಯುತ್ತಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಪ್ರಕಟಿಸುವ ಕನ್ನಡ ನಿಘಂಟು ಸಂಪುಟಗಳು ಕನ್ನಡದ ಭಾಷಾ ಸಮೃದ್ಧಿಯನ್ನು ದಾಖಲಿಸುವ ಮಹತ್ವದ ಗ್ರಂಥಗಳಾಗಿವೆ. ಕನ್ನಡದ ಮಹತ್ವದ ಕವಿಗಳ ಕಾವ್ಯಗಳ ಹಕ್ಕುಸ್ವಾಮ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ಹೊಂದಿದೆ. ಕನ್ನಡ ಭಾಷಾಭಿಮಾನ ಭಾಷಣಗಳಿಗೆ ಮಾತ್ರ ಸೀಮಿತವಾಗಬಾರದು. ಉನ್ನತ ಶಿಕ್ಷಣ ಸೇರಿದಂತೆ ಎಲ್ಲ ಹಂತದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಬೇಕು. ಬದಲಾಗುತ್ತಿರುವ ಜಾಗತಿಕ ಮಟ್ಟದ ತಂತ್ರಜ್ಞಾನಕ್ಕೂ ಕನ್ನಡ ಭಾಷೆಯನ್ನು ಉನ್ನತೀಕರಣ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಕೆ.ಬಾಲಕೃಷ್ಣ, ಕನ್ನಡ ವಿಭಾಗದ ಮುಖ್ಯಸ್ಥ ಗಿರೀಶ್ ಬರಗೂರು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕೋಶಾಧ್ಯಕ್ಷ ಮುನಿರಾಜು,ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪದಾಧಿಕಾರಿಗಳಾದ ರಮೇಶ್, ಸಿ.ಪಿ.ಎನ್.ರೆಡ್ಡಿ, ಸಂಪತ್ ಕುಮಾರ್, ರವಿಕುಮಾರ್, ನಾಗರತ್ನಮ್ಮ, ಅಂಜನಮೂರ್ತಿ, ಅಣ್ಣಯ್ಯ, ಮಲ್ಲೇಶ್,ರಂಗಸ್ವಾಮಯ್ಯ, ಸಫೀರ್, ಹಾಡೋನಹಳ್ಳಿ ಗೋವಿಂದರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.