ದೊಡ್ಡಬಳ್ಳಾಪುರ: ತಾಲ್ಲೂಕಿನ ಕೂಗೋನಹಳ್ಳಿಯ ಭೈರವೇಶ್ವರಸ್ವಾಮಿ ಹಾಗೂ ಲಕುಮಿದೇವಿ ಸೇವಾ ಅಭಿವೃದ್ಧಿ ಸಮಿತಿಯಿಂದ 12ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಮಾರಂಭ ಮೇ 17ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮೇ 17ರ ಬೆಳಗ್ಗೆ 9 ಗಂಟಗೆ ವಿಶೇಷ ಪೂಜೆ, ಗಣಪತಿ ಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ, ಸಂಜೆ ಗ್ರಾಮ ದೇವರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಮೇ 18ರ ಬೆಳಗ್ಗೆ 8 ಗಂಟೆಯಿಂದ ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ ಭಕ್ತಾಧಿಗಳಿಂದ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮೇ 19ರಂದು ದೇವರ ಉತ್ಸವ, ಮೆರವಣಿಗೆ ಹಾಗೂ ಮಹಾಮಂಗಳಾರತಿ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-257757896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.