ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ಜಾರಿ ಮಾಡಿರುವುದನ್ನು ಖಂಡಿಸಿ ಮಂಗಳವಾರ ಸಿಐಟಿಯು ವತಿಯಿಂದ ನಗರದ ತಾಲ್ಲೂಕು ಕಚೇರಿ ಸಮೀಪದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ.ವೆಂಕಟೇಶ್ ಮಾತನಾಡಿ, ‘2025ರಲ್ಲೇ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ತರುವ ಅಂತಿಮ ಪ್ರಕಟಣೆಯನ್ನು ಕೇಂದ್ರದ ಎನ್ಡಿಎ ಸರ್ಕಾರ ಮಾಡಿತು. ಕೇಂದ್ರ ಸರ್ಕಾರ ಪ್ರಕಟಿಸಿದ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಹಾಗೂ ಸಿಐಟಿಯು ಸಂಘಟನೆ ಸಲ್ಲಿಸಿದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸದೆ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿನ ಗೆಲುವು ನೀಡಿರುವ ಅಹಂಕಾರದೊಂದಿಗೆ ಕೇಂದ್ರ ಸರ್ಕಾರ ದೇಶದ ಕಾರ್ಮಿಕ ವರ್ಗದ ವಿರುದ್ಧ ಕಾಯ್ದೆಗಳನ್ನು ಜಾರಿಗೆ ತಂದಿದೆ’ ಎಂದು ಆರೋಪಿಸಿದರು.

‘ಸರ್ಕಾರವು ಹಠಮಾರಿ ಧೋರಣೆಯೊಂದಿಗೆ, ಕೇಂದ್ರ ಕಾರ್ಮಿಕ ಸಂಘಗಳ ಯಾವುದೇ ಮನವಿ, ಪ್ರತಿಭಟನೆಗಳು ಮತ್ತು ಮುಷ್ಕರಗಳನ್ನು ಲಕ್ಷಿಸದೆ, ಬಂಡವಾಳಶಾಹಿಗಳ ಬೇಡಿಕೆಗಳನ್ನು ಪೂರೈಸಲು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ಇದು ದೇಶದ್ರೋಹಿ ಕ್ರಮವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರದ ಈ ಪ್ರಜಾವಿರೋಧಿ ನಿರ್ಧಾರದ ವಿರುದ್ಧ, ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆಗಳನ್ನು ಸಿಐಟಿಯು ನಡೆಸುತ್ತಿದೆ. ಇದಕ್ಕೆ ಎಲ್ಲಾ ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ’ ಎಂದರು.

ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಎಲ್.ಸಿ.ಸುಮಾ, ಬಿರ್ಲಾ ಸೂಪರ್ ಬಲ್ಕ್ ಟರ್ಮಿನಲ್ ವರ್ಕರ್ಸ್ ಯೂನಿಯನ್ ಮುಖಂಡ ಮನೀಶ್ಶರ್ಮ, ಎಫ್.ಎಫ್.ಐ ಜೀನ್ಸ್ ನೀಟ್ ಕಾರ್ಮಿಕರ ಸಂಘದ ಮುಖಂಡ ಪಿ.ಕೆ.ವೆಂಕಟೇಶ್, ಬೀದಿ ಬದಿ ವ್ಯಾಪಾರಿಗಳ ಸಂಘದ ಮುಖಂಡ ಬಿ.ನರೇಶ್ ಕುಮಾರ್, ಆಟೊರಿಕ್ಷಾ ಡ್ರೈವರ್ಸ್ ಯೂನಿಯನ್ ಮುಖಂಡ ಏಜಾಜ್ ಪಾಷಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-19291383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.