ದೊಡ್ಡಬಳ್ಳಾಪುರ: ದೇಶದ ಕಾರ್ಮಿಕರ ಹಿತಾಸಕ್ತಿಯನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಯನ್ನು ಅನುಷ್ಠಾನಕ್ಕೆ ತಂದಿದೆ. ಈ ಮೂಲಕ ಬಹುವರ್ಗದ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಮೀನಾಕ್ಷಿ ಸುಂದರಂ ಆರೋಪಿಸಿದರು.

ಸಿಐಟಿಯು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿ, ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡವನ್ನೂ ತರಲಾಗಿತ್ತು. ಕೇಂದ್ರ ಸರ್ಕಾರ ಪ್ರಕಟಿಸಿದ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಹಾಗೂ ಸಿಐಟಿಯು ಸಂಘಟನೆ ಸಲ್ಲಿಸಿದ ಯಾವುದೇ ಆಕ್ಷೇಪಣೆ ಪರಿಗಣಿಸದೆ ಅಂತಿಮ ನಿಯಮಾವಳಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಕೇಂದ್ರ ಸರ್ಕಾರ ದುಡಿಯುವ ವರ್ಗದ ವಿರುದ್ಧ ತನ್ನ ಕಪಟ ನೀತಿ ಮುಂದುವರೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಹಿತೆ ಪ್ರತಿ ಸುಡುವ ಪ್ರತಿಭಟನೆ: ಸಿಐಟಿಯು ಅಖಿಲ ಭಾರತ ಸಮಿತಿಯು ನೀಡಿರುವ ಕರೆಯ ಮೇರೆಗೆ ಮೇ 12ರಂದು ಬುಧವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಕೆಲಸದ ಸ್ಥಳಗಳಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಗಳ ಪ್ರತಿಗಳನ್ನು ಸಾಮೂಹಿಕ ವಾಗಿ ಸುಡುವ ಮೂಲಕ ಪ್ರತಿಭಟಿಸಲು ಸಿಐಟಿಯು ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.

ಸಿಐಟಿಯು ಜಿಲ್ಲಾ ಖಜಾಂಚಿ ಮೋಹನ್ಬಾಬು, ಉಪಾಧ್ಯಕ್ಷ ತಿರುಮಲಾಚಾರಿ, ಬಸವರಾಜು, ವೀರಣ್ಣ, ಶಂಬಣ್ಣ,ವಿಷಕಂಠ, ಮಂಜುನಾಥ, ಕಾರ್ಯದರ್ಶಿ ಅಂಜುಮ್ಖಾನ್, ಸುಮಾ, ಮಧು,ಅನಿಲ್ಗುಪ್ತ, ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-15-696547551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.