ದೊಡ್ಡಬೆಳವಂಗಲ (ದೊಡ್ಡಬಳ್ಳಾಪುರ): ತಾಲ್ಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ, ಸೊಣ್ಣೆನಹಳ್ಳಿ, ನಾರಾನಹಳ್ಳಿ ಸುತ್ತಮುತ್ತಲಿನ ಫಲವತ್ತಾದ 2,100 ಎಕರೆ ಕೃಷಿ ಜಮೀನು ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಸ್ಥಳದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಿಸಲಾಯಿತು.

ದೊಡ್ಡಬೆಳವಂಗಲ ಹೋಬಳಿ ವಿರೋಧಿ ಹೋರಾಟ ಸಮಿತಿಯಿಂದ ಹಳೆ ನಾಡಕಚೇರಿ ಮುಂದೆ ನಡೆಯುತ್ತಿರುವ ಈ ಧರಣಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಕೆ.ಸುಲೋಚನಮ್ಮ ವೆಂಕಟರೆಡ್ಡಿ ಮಾತನಾಡಿ, ‘ದೇಶದ ಎಲ್ಲ ದುಡಿಯುವ ಜನರು ನೆಮ್ಮದಿಯಾಗಿ ಬದುಕುವ ಹಕ್ಕನ್ನು ಸಂವಿಧಾನ ಬದ್ಧವಾಗಿ ನೀಡಿರುವ ಅಂಬೇಡ್ಕರ್ ಆಶಯವನ್ನು ಇಂದಿನ ಆಡಳಿತಗಾರರ ಬೇಜವಾಬ್ದಾರಿಯಿಂದಾಗಿ ಬೀದಿಗೆ ಬರುವಂತಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಅಭಿವೃದ್ಧಿ ಹೆಸರಿನಲ್ಲಿ ಒಕ್ಕಲೆಬ್ಬಿಸಲಾಗುತ್ತಿದೆ. ಸ್ವಂತ ಹಣದಿಂದ ನೀರಾವರಿ ಸೌಲಭ್ಯ ಕಲ್ಪಿಸಿಕೊಂಡು ಸಮೃದ್ಧ ಬೆಳೆ ಬೆಳೆಯುತ್ತಿರುವ ಈ ಪ್ರದೇಶವನ್ನು ‘ಖಾಲಿ ಜಮೀನು’ ಎಂದು ವರದಿ ನೀಡಿರುವುದು ಅತ್ಯಂತ ಖಂಡನೀಯ. ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸುವ ಮೂಲಕ ಪೂರ್ವಜರಿಂದ ಬಂದಿರುವ ಜಮೀನನ್ನು ಮಕ್ಕಳಿಗೆ ಉಳಿಸಿಕೊಡುವ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದರು.

ಧರಣಿ ಸತ್ಯಾಗ್ರಹ ಸ್ಥಳದಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಭೂಸ್ವಾಧೀನಕ್ಕೆ ಒಳಗಾಗುತ್ತಿರುವ ಗ್ರಾಮಗಳ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-15-802801598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.