ದೊಡ್ಡಬೆಳವಂಗಲ(ದೊಡ್ಡಬಳ್ಳಾಪುರ): ತಾಲ್ಲೂಕಿನ ದೊಡ್ಡಬೆಳವಂಗಲ ಸುತ್ತ 2,100 ಎಕರೆ ಫಲವತ್ತಾದ ಕೃಷಿ ಭೂಸ್ವಾಧೀನ ವಿರೋಧಿಸಿ ದೊಡ್ಡಬೆಳವಂಗಲ ಕೃಷಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಮಾರ್ಚ್ 31 ರಂದು ಚಿಕ್ಕಬೆಳವಂಗಲದಿಂದ ತಾಲ್ಲೂಕು ಕಚೇರಿವರೆಗೆ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ.

ಕೆಎಐಡಿಬಿ ಸ್ವಾಧೀನಕ್ಕೆ ಮುಂದಾಗಿರುವ 2,100 ಎಕರೆ ಕೃಷಿ ಭೂಮಿಯಲ್ಲಿ ಶೇ 80 ರಷ್ಟು ಕೊಳವೆ ಬಾವಿಗಳ ಮೂಲಕ ಅಡಿಕೆ, ತೆಂಗು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಆದರೆ ಕಂದಾಯ ಅಧಿಕಾರಿಗಳು ಸ್ವಾಧೀನಕ್ಕೆ ಒಳಪಡುತ್ತಿರುವ ಭೂಮಿಯು ಖಾಲಿಯಾಗಿದೆ ಎಂದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದು ರೈತ ವಿರೋಧಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕ್ಷೇತ್ರದ ಶಾಸಕ ಧೀರಜ್ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಪಕ್ಷಾತೀತವಾಗಿ ಎಲ್ಲರ ಸಮ್ಮುಖದಲ್ಲಿ ರೈತರ ಸಭೆ ನಡೆಸಿ ಭೂಸ್ವಾಧೀನವನ್ನು ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಮಾರ್ಚ್ 31 ರಂದು ಟ್ರ್ಯಾಕ್ಟರ್ ಜಾಥಾ ನಡೆಸಲಾಗುತ್ತಿದೆ. ಈ ಜಾಥಾಕ್ಕೆ ತಾಲ್ಲೂಕಿನ ವಿವಿಧ ಸಂಘಟನೆಗಳು, ರೈತರು ಬೆಂಬಲ ನೀಡಿದ್ದಾರೆ ಎಂದು ಮುಖಂಡರಾದ ಪ್ರಭಾಬೆಳವಂಗಲ, ಸುನಿಲ್ಕುಮಾರ್, ಡಿ.ಸಿ.ಶಶಿಧರ್,ಕೇಶವ ಕುಮಾರ್, ಸಿ.ಎಚ್.ರಾಮಕೃಷ್ಣಯ್ಯ ತಿಳಿಸಿದರು.

ಕೆಂಪೇಗೌಡ, ಮನು, ತಿಮ್ಮೇಗೌಡ, ಹಬಿಬುಲ್ಲಾಖಾನ್, ಡಿ.ಎನ್.ಹನುಮಂತರಯಪ್ಪ, ಸಾಗರ್, ಸುರೇಶ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-15-965355744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.