ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆಯಲ್ಲಿ 1,885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಜೂ.5ರಂದು ನಡೆಯುತ್ತಿರುವ ರೈತರ ವಿಧಾನಸೌಧ ಚಲೋ ಪ್ರತಿಭಟನೆ ಬೆಂಬಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರೈತ ಸಂಘ ಹೋರಾಟದಲ್ಲಿ ಭಾಗವಹಿಸಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆ ಹೆಸರಿನಲ್ಲಿ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಕ್ರಮ ಖಂಡನೀಯ. ತಾಲ್ಲೂಕಿನಲ್ಲಿ ಅಪರಲ್ ಪಾರ್ಕ್ಗಾಗಿ ನೂರಾರು ಎಕರೆ ಜಮೀನು ರೈತರಿಂದ ಕಿತ್ತುಕೊಂಡು, ಬಂಡವಾಳ ಷಾಹಿಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಆಹಾರ ಭದ್ರತೆಗಾಗಿ 80ರ ದಶಕದಲ್ಲಿ ಬೇರೆ ದೇಶಗಳಿಗೆ ಭಿಕ್ಷೆ ಬೇಡಬೇಕಿತ್ತು. ಸಕ್ಕರೆ ಕಾರ್ಖಾನೆ, ಸೋಲಾರ್ ಯೋಜನೆಗಳು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲು ಯಾರೋ ಒಬ್ಬರಿಗೆ ಹತ್ತು ಸಾವಿರ ಎಕರೆ ಕೊಟ್ಟು ವಿದ್ಯುತ್ ಉತ್ಪಾದನೆ ಮಾಡುವುದರಲ್ಲಿ ಅರ್ಥವಿಲ್ಲ. ರೈತರಿಗೆ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶ ನೀಡಬೇಕು. ಈಚೆಗೆ ರಾಜ್ಯದಲ್ಲಿ ಬಲವಂತದ ಭೂಸ್ವಾಧೀನ ನಡೆಯುತ್ತಿದೆ. ತಾಲ್ಲೂಕಿನಲ್ಲಿಯೂ ಭೂಸ್ವಾಧೀನ ನಡೆಯುತ್ತಿದೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ತಾಲ್ಲೂಕು ಮುಖಂಡರಾದ ಮಹೇದೇವ್, ರವಿ ಶಿರವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-1505159035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.