ದೊಡ್ಡಬಳ್ಳಾಪುರ: ತಾಲ್ಲೂಕಿನ ಮೇಲಿನ ನಾಯಕರಂಡಳ್ಳಿ ಸರ್ವೆ ನಂಬರ್ 17ರಲ್ಲಿ ಸುಮಾರು 85 ರೈತರಿಗೆ ಭೂಮಿ ಮಂಜೂರಾಗಿದೆ. ಆದರೆ, ಸಂಪರ್ಕ ರಸ್ತೆ ಕಲ್ಪಿಸದಿರುವುದರಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎರಡು ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದರ ವಿರುದ್ಧ ಕರುನಾಡು ರಾಷ್ಟ್ರೀಯ ಸೇನೆ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಬಿ.ಶಿವಶಂಕರ್ ಮಾತನಾಡಿ, ಸರ್ಕಾರಿ ಭೂಮಿ ಕಬಳಿಕೆಗೆ ಪ್ರಯತ್ನ ನಡೆಯುತ್ತಿದೆ. 30 ವರ್ಷದಿಂದ ವ್ಯವಸಾಯ ಮಾಡುತ್ತಿರುವ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ. ಇದನ್ನು ತಡೆಗಟ್ಟಬೇಕೆಂದು ಹೇಳಿದರು.

ಗ್ರಾಮಸ್ಥ ಶ್ರೀನಿವಾಸ್ ಮಾತನಾಡಿ, 2021ರಿಂದ ರಸ್ತೆಗಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

ಧರಣಿಯಲ್ಲಿ ಸಂಘದ ಮುಖಂಡರಾದ ನರಸಿಂಹಮೂರ್ತಿ, ಗಂಗಿರೆಡ್ಡಿ, ಚಂದ್ರಶೇಖರ, ಚಂದ್ರಿಕಾ, ಕುಮಾರ್, ರಂಜಿತಾ ಹಾಗೂ ಗ್ರಾಮಸ್ಥರಾದ ಉಮೇಶ್, ಮಂಜುನಾಥ್, ಗಂಗಾಧರ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-15-2109784156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.