ದೊಡ್ಡಬಳ್ಳಾಪುರ: ಸೇವೆ ಕಾಯಂ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಫೆಬ್ರುವರಿ 20 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ಭೂ ಮಾಪಕರನ್ನು ಕರೆದು ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಈಗ ತಾವೇ ಮುಖ್ಯಮಂತ್ರಿಯಾಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ ಎಂದು ಭೂ ಮಾಪಕ ರಾಜಶೇಖರ್ ಬೇಸರಿಸಿದರು.

‘ಕಂದಾಯ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 35 ಜನ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲ’ ಎಂದರು.

‘ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಕಾಯಂ ಮಾಡಬೇಕು ಎಂದು ಭೂಮಾಪಕ ಕಾಂತರಾಜು ಒತ್ತಾಯಿಸಿದರು.

ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದು ರೈತ ಕೆಸ್ತೂರು ರಮೇಶ್ ತಿಳಿಸಿದರು.

ಭೂ ಮಾಪಕರಾದ ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ರಾಘವೆಂದ್ರ, ನರಸಿಂಹಮೂರ್ತಿ, ವಾಸು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-15-1776387920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.