ದೊಡ್ಡಬಳ್ಳಾಪುರ: ತಾಲ್ಲೂಕು ವಕೀಲರ ಸಂಘದ ದಾಖಲೆ ಪರಿಶೀಲನೆಗೆ ವಿಚಾರಣಾಧಿಕಾರಿಯನ್ನು ನೇಮಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೊಂದಣಿ ಅಧಿಕಾರಿ ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ಆದೇಶಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘ ನೋಂದಣಿ ಆದಾಗಿಂದ ಇದುವರೆಗೂ ನವೀಕರಣ ಮಾಡದೆ ಇರುವ ಬಗ್ಗೆ ಹಾಗೂ ಬೈಲಾ ತಿದ್ದುಪಡಿ ಮಾಡದೆ ಕಾನೂನು ಬಾಹಿರವಾಗಿ ಹೊಸದಾಗಿ ಮೂರು ನಿರ್ದೆಶಕರ ಸ್ಥಾನ ಹಾಗೂ ಮಹಿಳಾ ಖಜಾಂಚಿ ಸ್ಥಾನ ನಿಗದಿಪಡಿಸಿರುವ ಬಗ್ಗೆ ವಕೀಲ ಟಿ.ಕೆ.ಹನುಮಂತರಾಜು ಅವರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಈ ಕುರಿತಂತೆ ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಶಿವಕುಮಾರ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿದ್ದು, ತಾಲ್ಲೂಕು ವಕೀಲರ ಸಂಘಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ, ನಿಖರವಾದ ವರದಿಯನ್ನು ಸ್ಪಷ್ಟ ಅಭಿಪ್ರಾಯದೊಂದಿಗೆ 45 ದಿನಗಳ ಒಳಗಾಗಿ ಮಾಹಿತಿ ನೀಡುವಂತೆ ಆದೇಶ ನೀಡಿದ್ದಾರೆ ಎಂದು ಹನುಮಂತರಾಜು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-15-246335232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.