ದೊಡ್ಡಬಳ್ಳಾಪುರ: ತಾಲ್ಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ ಪ್ರಶಸ್ತಿ ವಿತರಣೆ ನಗರದ ವಕೀಲರ ಭವನದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ, ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಬಸವ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ರೇಖಾ ಮಾತನಾಡಿ, ಅಂಬೇಡ್ಕರ್ ಶೋಷಿತರು, ಮಹಿಳೆಯರ ಪರ ಧ್ವನಿಯಾಗಿ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿಕೊಟ್ಟವರು. ಬಾಬು ಜಗಜೀವನ ರಾಂ ರೈತಪರ ಕಾಳಜಿಯನ್ನು ಇಡೀ ದೇಶ ಸ್ಮರಿಸುತ್ತದೆ. ಶಿವಕುಮಾರಸ್ವಾಮೀಜಿ ತ್ರಿವಿಧ ದಾಸೋಹ ಮೂಲಕ ಹೆಸರಾದರು.

4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ನಿರ್ಮಲಾ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ಎ.ಶಿಲ್ಪ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ಎಸ್.ಪ್ರವೀಣ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್, 1ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಪ್ರೀತಿ, ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಕನಕರಾಜ್, ಉಪಾಧ್ಯಕ್ಷ ಕೆ.ಜಗನ್ನಾಥ್, ಖಜಾಂಚಿ ಆರ್.ಗೀತಾ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-15-1338828532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.